ಕಾರವಾರ: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನವು ಅಕ್ಟೋಬರ್ 23ರ ಶುಕ್ರವಾರ ನಡೆಯಲಿದ್ದು, ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಅರ್ಹ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಅನುಕೂಲವಾಗುವಂತೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ.
ಸರ್ಕಾರದ ಅಧಿಸೂಚನೆ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ-1951ರ ಕಲಂ 135(ಬಿ) ಅನ್ವಯ ಈ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಶೈಕ್ಷಣಿಕ ಸಂಸ್ಥೆಗಳು, ಇಲಾಖೆಗಳು, ಸಂಘ-ಸಂಸ್ಥೆಗಳು ಹಾಗೂ ಕೈಗಾರಿಕಾ ಸಂಸ್ಥೆಗಳಲ್ಲಿ (Establishments) ಕಾರ್ಯನಿರ್ವಹಿಸುತ್ತಿರುವ ಮತದಾರರು ಅಕ್ಟೋಬರ್ 23ರಂದು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಪೂರ್ವಾನುಮತಿಯೊಂದಿಗೆ ವಿಶೇಷ ಸಾಂದರ್ಭಿಕ ರಜೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಮತಕ್ಷೇತ್ರ ವ್ಯಾಪ್ತಿಯ ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ತಿಳಿಸಿದ್ದಾರೆ.
ಅರ್ಹರಿಗೆ ಸಾಂದರ್ಭಿಕ ರಜೆ ಘೋಷಣೆ!
