ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Trending

ಉತ್ತರ ಕನ್ನಡದಲ್ಲಿ ಜುಲೈ 2 ರವರೆಗೆ ಆರೆಂಜ್ ಅಲರ್ಟ್

Pakka News Web • 29 ಜೂನ್ 2026,

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 30 ರಿಂದ ಜುಲೈ 2 ರವರೆಗೆ ಭಾರಿ ಮಳೆ ಹಾಗೂ ಬಿರುಗಾಳಿ ಬೀಸುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಕೆರೆ, ನದಿ ಹಾಗೂ ಸಮುದ್ರ ತೀರಕ್ಕೆ ಇಳಿಯದಂತೆ ಮತ್ತು ಮೀನುಗಾರರು ಕಡ್ಡಾಯವಾಗಿ ಸಮುದ್ರಕ್ಕೆ ತೆರಳದಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಮಳೆ ಹಾಗೂ ಸಿಡಿಲಿನ ಸಂದರ್ಭದಲ್ಲಿ ರೈತರು ಕೃಷಿ ಚಟುವಟಿಕೆಗಳಿಂದ ದೂರವಿರಬೇಕು ಮತ್ತು ಸಾರ್ವಜನಿಕರು ವಿದ್ಯುತ್ ಕಂಬ, ಅಪಾಯಕಾರಿ ಮರ ಹಾಗೂ ಶಿಥಿಲಗೊಂಡ ಕಟ್ಟಡಗಳ ಆಶ್ರಯ ಪಡೆಯಬಾರದು ಎಂದು ಸೂಚಿಸಲಾಗಿದೆ. ತಗ್ಗು ಪ್ರದೇಶ ಹಾಗೂ ದುರ್ಬಲ ಮನೆಗಳಲ್ಲಿ ವಾಸಿಸುವವರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಅಥವಾ ತಾಲೂಕು ಆಡಳಿತದ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಗೊಳ್ಳಲು ಕೋರಲಾಗಿದೆ. ತುರ್ತು ಪರಿಸ್ಥಿತಿ ಹಾಗೂ ನೆರವಿಗೆ ಸಾರ್ವಜನಿಕರು ಜಿಲ್ಲಾ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಸಂಖ್ಯೆ 08382-229857 ಅಥವಾ ವಾಟ್ಸಾಪ್ ಸಂಖ್ಯೆ 9483511015 ಅನ್ನು ಸಂಪರ್ಕಿಸಬಹುದಾಗಿದೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250