ಅಂಕೋಲಾ ತಾಲೂಕಿನ ಅವರ್ಸಾ ಕವಲಗದ್ದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಸ್ತೆಬದಿಗೆ ಪಲ್ಟಿಯಾಗದ ಘಟನೆ ಗುರುವಾರ ಸಂಭವಿಸಿದೆ.

ಅದೃಷ್ಟವಶಾತ್, ನಿಯಂತ್ರಣ ಕಳೆದುಕೊಂಡ ಬಸ್ ಅಲ್ಲೇ ಇದ್ದ ಮರಕ್ಕೆ ಅಡ್ಡಲಾಗಿ ಸಿಲುಕಿ ನಿಂತಿದ್ದರಿಂದ ದೊಡ್ಡ ದುರಂತವೇ ತಪ್ಪಿದಂತಾಗಿದೆ.

ಈ ಭೀಕರ ಅಪಘಾತದಲ್ಲಿ ಬಸ್ಸಿನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಕೇವಲ ಚಿಕ್ಕಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಘಟನೆ ನಡೆದ ತಕ್ಷಣವೇ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ತನಿಖೆ ಮುಂದುವರಿಸಿದ್ದಾರೆ
