ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Crime

ಗಾಂಜಾ ಸೇವನೆ: ವ್ಯಕ್ತಿಯ ಬಂಧನ

Pakka News Web • 6 ಜುಲೈ 2026,

ಗೋಕರ್ಣ:ಇಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿ ತೇಲುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕ್ರಮ ಕೈಗೊಂಡಿದ್ದಾರೆ. ಅಂಕೋಲಾ ಕಾಕರಮಠ ನಿವಾಸಿ ಅಪ್ತಾಬ ಅಲ್ತಾಪ ಶೇಕ್ ಬಂಧಿತ ಆರೋಪಿಯಾಗಿದ್ದಾನೆ. ಗೋಕರ್ಣದ ಪ್ರವಾಸಿ ಮಂದಿರದ ಬಳಿ ಆರೋಪಿಯು ಮಾದಕ ಪದಾರ್ಥ ಗಾಂಜಾ ಸೇವಿಸಿ, ಅಮಲಿನಲ್ಲಿ ಅಲೆದಾಡುತ್ತಿದ್ದಾಗ ಅನುಮಾನದ ಮೇಲೆ ಪೊಲೀಸ್ ಉಪನಿರೀಕ್ಷಕ ಅನಿಲ್ ಬಿ.ಎಮ್. ನೇತೃತ್ವದ ತಂಡ ಆತನನ್ನು ವಶಕ್ಕೆ ಪಡೆದಿದೆ. ಬಳಿಕ ಪಂಚರ ಸಮಕ್ಷಮದಲ್ಲಿ ಆರೋಪಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250