ಕಾರವಾರ: ನಗರದ ಕೋಡಿಬೀರ ದೇವಸ್ಥಾನದ ಸಮೀಪದ ನಿವಾಸದಲ್ಲಿ ಹಣ್ಣಿನ ವ್ಯಾಪಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಮೃತರನ್ನು ನಿಯಾಜ್ ಹುಸೇನ್‌ಸಾಬ್ ನೀಲಂಜಿ ಎಂದು ಗುರುತಿಸಲಾಗಿದೆ. ಅವರು ಕಳೆದ ಹಲವು ವರ್ಷಗಳಿಂದ ನಗರದ ಮೀನು ಮಾರುಕಟ್ಟೆ ಕಟ್ಟಡದ ಮಳಿಗೆಯಲ್ಲಿ ಹಣ್ಣಿನ ವ್ಯಾಪಾರ ನಡೆಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ವಿವಿಧ ಊಹಾಪೋಹಗಳು ಕೇಳಿಬರುತ್ತಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
