ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Crime

ಅಡ್ಲೂರು ಸಮೀಪ ಜಿಪ್ಸಮ್ ತುಂಬಿದ ಲಾರಿ ಪಲ್ಟಿ

Pakka News Web • 13 ಜುಲೈ 2026,

ಅಂಕೋಲಾ ತಾಲೂಕಿನ ಅಡ್ಲೂರು ಸಮೀಪ ಜಿಪ್ಸಮ್ ಪುಡಿ ತುಂಬಿಕೊಂಡು ಹೊಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಕೇರಳದ ಕೊಚ್ಚಿಯಿಂದ ಕೊಪ್ಪಳದ ಕಡೆಗೆ ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಅಪಘಾತದ ಪರಿಣಾಮ ರಸ್ತೆ ಬದಿಯಲ್ಲಿದ್ದ ಹಲವು ಮರಗಳು ಹಾಗೂ ವಿದ್ಯುತ್ ಕಂಬಗಳು ಮುರಿದಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವೆಂದು ತಿಳಿದುಬಂದಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕ್ರಮ ಕೈಗೊಂಡರು. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250