ಇನ್ಸ್ಟಾಗ್ರಾಮ್ ಮೂಲಕ ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸಿ, ಡೌನ್ಲೋಡ್ ಮಾಡಿ ಇತರರಿಗೆ ಹಂಚಿಕೆ ಮಾಡಿದ ಆರೋಪದ ಮೇಲೆ ಭಟ್ಕಳ ಮೂಲದ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಯು ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿವಿಧ ಪ್ರವಾಸಿ ತಾಣಗಳ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದನು. ಇದೇ ವೇಳೆ ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸಿ, ಅವುಗಳನ್ನು ಡೌನ್ಲೋಡ್ ಮಾಡಿಕೊಂಡಿದ್ದ ಎನ್ನಲಾಗಿದೆ.
ಏಪ್ರಿಲ್ 24ರಂದು ಆರೋಪಿಯ ಮೊಬೈಲ್ನಲ್ಲಿದ್ದ ಕೆಲವು ವಿಡಿಯೋಗಳು ಇನ್ಸ್ಟಾಗ್ರಾಮ್ ಮೂಲಕ ಮತ್ತೊಬ್ಬ ಮಹಿಳೆ ಸೇರಿದಂತೆ ಇತರರಿಗೆ ಹಂಚಿಕೆಯಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಭಟ್ಕಳ ಪೊಲೀಸ್ ಠಾಣೆಯ ಪಿಎಸ್ಐ ನವೀನ್ ನಾಯ್ಕ ಅವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾದ ಬಳಿಕ ಆರೋಪಿಯು ವಿಡಿಯೋಗಳನ್ನು ಅಳಿಸಿದ್ದಾನೆ ಎನ್ನಲಾಗಿದೆ. ಸದ್ಯ ಆರೋಪಿಯ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದು, ಮಕ್ಕಳ ಅಶ್ಲೀಲ ವಿಡಿಯೋಗಳ ವೀಕ್ಷಣೆ ಮತ್ತು ಹಂಚಿಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತನಿಖೆ ನಡೆಸುತ್ತಿದ್ದಾರೆ.
