ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Crime

ಗಾಂಜಾ ನಶೆಯಲ್ಲಿದ್ದ ಇಬ್ಬರು ಯುವಕರ ಬಂಧನ!

Pakka News Web • 11 ಆಗಸ್ಟ್ 2026,

ಮಾದಕ ದ್ರವ್ಯ (ಗಾಂಜಾ) ನಶೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿ, ಸಾರ್ವಜನಿಕರ ಮೇಲೆ ಹಲ್ಲೆಗೆ ಯತ್ನಿಸಿದ ಇಬ್ಬರು ಯುವಕರನ್ನು ಜೋಯಿಡಾ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜೋಯಿಡಾ ಬಸ್ ನಿಲ್ದಾಣದ ಮುಂಭಾಗದಲ್ಲಿ ಯುವಕನೊಬ್ಬ ಗಾಂಜಾ ನಶೆಯಲ್ಲಿ ಗಲಾಟೆ ಮಾಡುತ್ತಿದ್ದಾಗ, ಸ್ಥಳದಲ್ಲಿದ್ದ ಸಾರ್ವಜನಿಕರು ಆತನಿಗೆ ಬುದ್ಧಿವಾದ ಹೇಳಲು ಯತ್ನಿಸಿದ್ದಾರೆ. 

ಆದರೆ ಆತ ಕೇಳುವ ಸ್ಥಿತಿಯಲ್ಲಿರಲಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಜೋಯಿಡಾ ಪೊಲೀಸರು, ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಮುಂದಾದಾಗ ಹಲ್ಲೆಗೆ ಯತ್ನಿಸಿದ್ದಾನೆ.

ಬಳಿಕ ಜೋಯಿಡಾ ಪಿಎಸ್‌ಐ ಜಗದೀಶ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಯುವಕರನ್ನು ವಶಕ್ಕೆ ಪಡೆದು, ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

 ಜೋಯಿಡಾ ಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುವ ದಂಧೆ ಸಕ್ರಿಯವಾಗಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಪೊಲೀಸ್ ಇಲಾಖೆಯು ಈ ಜಾಲವನ್ನು ಮೂಲದಿಂದಲೇ ಭೇದಿಸಿ, ಮಾದಕದ್ರವ್ಯ ಜಾಲದ ರೂವಾರಿಗಳನ್ನು ಬಂಧಿಸಿದರೆ ಮಾತ್ರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲು ಸಾಧ್ಯ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250