ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Crime

ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

Pakka News Web • 19 ಆಗಸ್ಟ್ 2026,

ಹೊನ್ನಾವರ ಪಟ್ಟಣದ ಬಂದರು ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಹೊನ್ನಾವರ ಪೊಲೀಸರು ಬಂಧಿಸಿ, ಆತನಿಂದ 116 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಕಾಸರಕೋಡ ಟೊಂಕಾ-2 ನಿವಾಸಿ ಮಹಮ್ಮದ್ ಅಲ್ತಾಫ್ (30) ಬಂಧಿತ ಆರೋಪಿ. ಬಂದರು ರಸ್ತೆಯ ಮಹಾಲಕ್ಷ್ಮೀ ಗ್ಯಾಸ್ ಗೋಡೌನ್ ಸಮೀಪ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆತನನ್ನು ಬಂಧಿಸಿದ್ದಾರೆ.

ಆತನ ಬಳಿಯಿದ್ದ ಗಾಂಜಾ, ಪ್ಯಾಕಿಂಗ್‌ಗೆ ಬಳಸುವ ಖಾಲಿ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಗಾಂಜಾ ನೀಡಿದ ಆರೋಪದಲ್ಲಿ ತೌಹೀದ್ ಹಾಗೂ ನಾಗರಾಜ ಅಚಾರಿ ಎಂಬವರ ಹೆಸರುಗಳನ್ನು ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮೂವರ ವಿರುದ್ಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250