ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Crime

ಬಸ್ಸು-ಬುಲೆರೋ ಡಿಕ್ಕಿ: ಚಾಲಕ ಗಂಭೀರ, ಹಲವರಿಗೆ ಸಣ್ಣಪುಟ್ಟ ಗಾಯ

Pakka News Web • 22 ಆಗಸ್ಟ್ 2026,

ಶಿರಸಿ: ತಾಲೂಕಿನ ಕಾಗೇರಿ ಸಮೀಪ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಸ್ ಹಾಗೂ ಬುಲೆರೋ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ಬುಲೆರೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಕೆಂಚಗದ್ದೆಯಿಂದ ಶಿರಸಿಯತ್ತ ಸಾಗುತ್ತಿದ್ದ ಬರೂರು-ಕೆಂಚಗದ್ದೆ ಬಸ್ ಹಾಗೂ ಬರೂರು ಕಡೆಗೆ ತೆರಳುತ್ತಿದ್ದ ಬುಲೆರೋ ವಾಹನ ಕಾಗೇರಿ ಸಮೀಪದ ತಿರುವಿನಲ್ಲಿ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬುಲೆರೋ ವಾಹನ ಜಖಂಗೊಂಡಿದ್ದು, ಚಾಲಕನ ಕಾಲಿಗೆ ಗಂಭೀರ ಗಾಯವಾಗಿದೆ.

ಅಪಘಾತದ ವೇಳೆ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250