ಹೊನ್ನಾವರ ತಾಲೂಕಿನ ದೊಡ್ಡಗುಂಡದಲ್ಲಿ 27 ವರ್ಷದ ವಿವಾಹಿತೆ ಅನುಮಾನಾಸ್ಪದವಾಗಿ ಮೃ*ತಪಟ್ಟ ಘಟನೆ ಬುಧವಾರ ನಡೆದಿದೆ.
ಮೃ*ತಳ ಸಾವಿನ ಕುರಿತು ಸಂಶಯ ವ್ಯಕ್ತಪಡಿಸಿ ಕುಟುಂಬಸ್ಥರು ದೂರು ನೀಡಿರುವ ಹಿನ್ನೆಲೆಯಲ್ಲಿ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೃತಳನ್ನು ದೊಡ್ಡಗುಂಡದ ಮಂಗಳಾ ಗಣಪತಿ ನಾಯ್ಕ (27) ಎಂದು ಗುರುತಿಸಲಾಗಿದೆ. ಮಂಗಳಾ ಅವರಿಗೆ ವಿವಾಹವಾಗಿ ಐದು ವರ್ಷಗಳಾಗಿದ್ದು, ಅವರ ಸಾ*ವಿನ ಹಿಂದೆ ಯಾವುದೋ ಕಾರಣವಿರಬಹುದು ಎಂಬ ಅನುಮಾನವಿದೆ ಎಂದು ಮೃ*ತಳ ಅಕ್ಕ, ದಾಂಡೇಲಿಯ ಲಲಿತಾ ಸಚಿನ್ ಗುಂಜಿಕರ್ ಅವರು ಮಂಕಿ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಾವಿನ ನಿಖರ ಕಾರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾರವಾರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
