ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Crime

ಕಾಳಿ ನದಿಯಲ್ಲಿ ಮುಗುಚಿದ ದೋಣಿ!

Pakka News Web • 31 ಆಗಸ್ಟ್ 2026,

ಕಾರವಾರ:ಗಣಪತಿ ಮಂಟಪ ತರಲು ಹೊರಟಿದ್ದ 62 ವರ್ಷದ ವ್ಯಕ್ತಿಯೊಬ್ಬರು ಕಾಳಿ ನದಿಯಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ನೀರುಪಾಲಾಗಿ ಮೃತಪಟ್ಟ ಘಟನೆ ಕಾರವಾರ ತಾಲೂಕಿನ ಉಳಗ ಗ್ರಾಮದಲ್ಲಿ ನಡೆದಿದೆ.

ಕಾರವಾರ ತಾಲೂಕಿನ ಸಿದ್ದರ ಗ್ರಾಮದ ನಿವಾಸಿ ಬಾಳಸು ಆಚಾರಿ ಮೃತಪಟ್ಟವರು. ಗಣೇಶೋತ್ಸವದ ಅಂಗವಾಗಿ ಗಣಪತಿ ಮಂಟಪ ತರಲು ಅವರು ಉಳಗ ಗ್ರಾಮಕ್ಕೆ ತೆರಳಿದ್ದರು. ಬಳಿಕ ಕಾಳಿ ನದಿಯನ್ನು ದಾಟಲು ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನದಿಯ ಮಧ್ಯಭಾಗದಲ್ಲಿ ದೋಣಿ ಏಕಾಏಕಿ ಮುಗುಚಿದೆ ಎನ್ನಲಾಗಿದೆ.

ದೋಣಿ ಮುಗುಚುತ್ತಿದ್ದಂತೆ ಬಾಳಸು ಆಚಾರಿ ನೀರಿಗೆ ಬಿದ್ದಿದ್ದು, ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಕದ್ರಾ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

ಬಳಿಕ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಈ ಘಟನೆ ಗ್ರಾಮದಲ್ಲಿ ಶೋಕದ ವಾತಾವರಣಕ್ಕೆ ಕಾರಣವಾಗಿದೆ. ಗಣೇಶೋತ್ಸವದ ಸಿದ್ಧತೆಯಲ್ಲಿದ್ದ ಕುಟುಂಬಕ್ಕೆ ದುರಂತ ಎದುರಾಗಿರುವುದು ಸಂಬಂಧಿಕರು ಹಾಗೂ ಗ್ರಾಮಸ್ಥರಲ್ಲಿ ಆಘಾತ ಮೂಡಿಸಿದೆ. ಘಟನೆ ಸಂಬಂಧ ಕದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250