ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Crime

ಕರ್ತವ್ಯದ ವೇಳೆ ಕೊನೆಯುಸಿರೆಳೆದ ತಹಶೀಲ್ದಾರ್ ಕಚೇರಿ ಸಿಬ್ಬಂದಿ

Pakka News Web • 8 ಸೆಪ್ಟೆಂ 2026,

ಕಾರವಾರ: ಎಂದಿನಂತೆ ಕಚೇರಿಗೆ ಬಂದು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಫಂಡರೀನಾಥ ವಿ. ನಾಯ್ಕ (52) ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಂಗಳವಾರ ಕಾರವಾರ ನಗರದಲ್ಲಿ ನಡೆದಿದೆ.

ಕಾರವಾರ ತಹಶೀಲ್ದಾರ್ ಕಚೇರಿಯಲ್ಲಿ ಎಂದಿನಂತೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಫಂಡರೀನಾಥ ನಾಯ್ಕ ಅವರಿಗೆ ಬೆಳಗ್ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಅವರು ಕಚೇರಿಯಲ್ಲೇ ಕುಸಿದುಬಿದ್ದಿದ್ದು, ಇದರಿಂದ ಆತಂಕಗೊಂಡ ಸಿಬ್ಬಂದಿ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ.

ತಹಶೀಲ್ದಾರ್ ಅವರ ಜೀಪ್‌ನಲ್ಲೇ ಅವರನ್ನು ತುರ್ತಾಗಿ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಚಿಕಿತ್ಸೆ ನೀಡಿದರೂ, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರದೆ ಕೊನೆಯುಸಿರೆಳೆದಿದ್ದಾರೆ.

ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಯೊಬ್ಬರು ದಿಢೀರ್ ಮೃತಪಟ್ಟ ಸುದ್ದಿ ಸಹೋದ್ಯೋಗಿಗಳಲ್ಲಿ ಆಘಾತ ಮೂಡಿಸಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250