ಅಕ್ಟೋಬರ್ 25, 2026
ಭಾನುವಾರ

ನಮ್ಮನ್ನು ಅನುಸರಿಸಿ

Crime

ಆಕಳಿಗೆ ಡಿಕ್ಕಿ: ಚರಂಡಿ ತಡೆಗೋಡೆಗೆ ಗುದ್ದಿದ ಕಾರು

Pakka News Web • 24 ಸೆಪ್ಟೆಂ 2026,

ಕಾರವಾರ: ವೇಗವಾಗಿ ಚಲಿಸುತ್ತಿದ್ದ ಗೋವಾ ನೋಂದಣಿಯ ಕಾರೊಂದು ರಸ್ತೆ ದಾಟುತ್ತಿದ್ದ ಆಕಳಿಗೆ ಡಿಕ್ಕಿ ಹೊಡೆದು, ಬಳಿಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಯ ತಡೆಗೋಡೆಗೆ ಗುದ್ದಿದ ಘಟನೆ ಗುರುವಾರ ಬೆಳಗ್ಗೆ ಕಾರವಾರದ ಹಬ್ಬುವಾಡದ ಶ್ರೀ ದಾಸ ಮಾರುತಿ ದೇವಸ್ಥಾನದ ಬಳಿ ನಡೆದಿದೆ.

ಕಾರಿನ ಡಿಕ್ಕಿಯ ರಭಸಕ್ಕೆ ಆಕಳು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಅಸ್ವಸ್ಥಗೊಂಡಿದೆ. ಅಪಘಾತದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚರಂಡಿಯ ತಡೆಗೋಡೆಗೂ ಹಾನಿಯಾಗಿದೆ.

ಘಟನೆಯ ಬಳಿಕ ಸ್ಥಳದಲ್ಲಿ ಸ್ಥಳೀಯರು ಜಮಾಯಿಸಿದ್ದು, ಗಾಯಗೊಂಡ ಆಕಳಿನ ಸ್ಥಿತಿ ಕಂಡು ಆತಂಕ ವ್ಯಕ್ತಪಡಿಸಿದರು. ಕಾರು ವೇಗವಾಗಿ ಬಂದಿದ್ದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದು, ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಿಗೊಂಡ ಕಾರನ್ನು ಪೊಲೀಸ್ ಠಾಣೆಗೆ ಸಾಗಿಸಲಾಗಿದೆ. ವಿವಿಧ ರಸ್ತೆಯಲ್ಲಿ ಬಿಡಾಡಿ ದನಗಳ ಕಾಟ ಹೆಚ್ಚಾಗಿದ್ದು ಇಂತಹ ಅಪಘಾತಗಳು ಸಂಭವಿಸುತ್ತಲೇ ಇದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250