ಅಕ್ಟೋಬರ್ 25, 2026
ಭಾನುವಾರ

ನಮ್ಮನ್ನು ಅನುಸರಿಸಿ

Crime

ಅಪ್ರಾಪ್ತೆಗೆ ಕಿರುಕುಳ ಆರೋಪ: ಪ್ರಕರಣ ದಾಖಲು

Pakka News Web • 17 ಆಕ್ಟೋ 2026,

ಮುಂಡಗೋಡ: ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದಡಿ 25 ವರ್ಷದ ಯುವಕನ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಸೇರಿದಂತೆ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ದೂರಿನ ಪ್ರಕಾರ, ಆರೋಪಿಯು ಕಳೆದ ಒಂದು ವರ್ಷದಿಂದ 16 ವರ್ಷದ ಬಾಲಕಿಯ ಪರಿಚಯ ಹೊಂದಿದ್ದ. ಅಕ್ಟೋಬರ್ 8ರಂದು ಬಾಲಕಿಯನ್ನು ಕರೆದೊಯ್ದು ಮೂರು ದಿನಗಳ ಕಾಲ ತನ್ನ ಕುಟುಂಬದೊಂದಿಗೆ ಮನೆಯಲ್ಲಿ ಇರಿಸಿಕೊಂಡಿದ್ದಾನೆ ಎನ್ನಲಾಗಿದೆ. ಬಳಿಕ ವಿವಿಧ ಸ್ಥಳಗಳಿಗೆ ಹಾಗೂ ಶಿಗ್ಗಾಂವಿ ತಾಲೂಕಿನ ರಾಕ್ ಗಾರ್ಡನ್‌ಗೆ ಬೈಕ್‌ನಲ್ಲಿ ಕರೆದೊಯ್ದು ಲೈಂಗಿಕ ಸಂಪರ್ಕಕ್ಕೆ ಒತ್ತಾಯಿಸಿ, ಅನುಚಿತವಾಗಿ ವರ್ತಿಸಿ ದೈಹಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಮದುವೆಯಾಗುವುದಿಲ್ಲ ಹಾಗೂ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಅಕ್ಟೋಬರ್ 12ರಂದು ಈ ಕುರಿತು ವಿಚಾರಿಸಲು ತೆರಳಿದ ಬಾಲಕಿಯ ತಾಯಿಗೂ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಬಂಧನ ಸೇರಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ನಡೆದಿದೆ. ಪ್ರಕರಣದ ತನಿಖೆಯನ್ನು ಮುಂಡಗೋಡ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಗೌಡ ಅವರು ಕೈಗೊಂಡಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250