ಅಕ್ಟೋಬರ್ 25, 2026
ಭಾನುವಾರ

ನಮ್ಮನ್ನು ಅನುಸರಿಸಿ

Crime

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ; ಯುವಕನ ಬಂಧನ

Pakka News Web • 25 ಆಕ್ಟೋ 2026,

ಭಟ್ಕಳ: ಮುರ್ಡೇಶ್ವರ ಸಮೀಪದ ಬಸ್ತಿಮಕ್ಕಿ ಕ್ರಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿದ ಆರೋಪದ ಮೇಲೆ 26 ವರ್ಷದ ಮೊಹಮ್ಮದ್ ಅಬಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅ.24ರಂದು ಸಂಜೆ 6.10ರ ಸುಮಾರಿಗೆ ಬಸ್ತಿಮಕ್ಕಿ ಕ್ರಾಸ್ ಬಳಿ ಗಾಂಜಾ ಸೇವಿಸುತ್ತಿರುವ ಶಂಕೆಯ ಮೇರೆಗೆ ಪಿಎಸ್‌ಐ ಹಣಮಂತ ಬಿರಾದಾರ ನೇತೃತ್ವದ ಪೊಲೀಸರು ಆತನನ್ನು ವಶಕ್ಕೆ ಪಡೆದು ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದರು. ತಪಾಸಣಾ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250