ಕಾರವಾರ:ತಾಲೂಕಿನ ಸಿದ್ದರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಳಿ ನದಿಯಿಂದ ರಾಜಾರೋಷವಾಗಿ ಅಕ್ರಮ ಮರಳು ಗಣಿಗಾರಿಕೆ ನಡೆಸಿ, ಟಿಪ್ಪರ್ ಮೂಲಕ ಸಾಗಿಸುತ್ತಿದ್ದ ಜಾಲವನ್ನು ಕಾರವಾರ ಗ್ರಾಮೀಣ ಠಾಣೆಯ ಪೊಲೀಸರು ಪತ್ತೆಹಚ್ಚಿದ್ದಾರೆ. ಖಚಿತ ಮಾಹಿತಿ ಮೇರೆಗೆ ಶುಕ್ರವಾರ ತಡ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಅಕ್ರಮ ಉಸುಕು (ಮರಳು) ತುಂಬಿದ್ದ ಟಿಪ್ಪರ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ. ಕಾಳಿ ನದಿಯಿಂದ ಅಕ್ರಮವಾಗಿ ಎತ್ತಲಾಗುವ ಮರಳು ನೇರವಾಗಿ ಗೋವಾ ರಾಜ್ಯಕ್ಕೆ ಕಳ್ಳಸಾಗಣೆಯಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಕೇಳಿಬರುತ್ತಿವೆ. ಹೀಗಾಗಿ, ಗಡಿ ಭಾಗದ ಮಾಜಾಳಿ ಚೆಕ್ ಪೋಸ್ಟ್ ಬಳಿ ಮತ್ತಷ್ಟು ಕಟ್ಟುನಿಟ್ಟಿನ ನಿಗಾ ವಹಿಸಿ, ಅಕ್ರಮಕ್ಕೆ ಬ್ರೇಕ್ ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ನಿಲ್ಲದ ಅಕ್ರಮ ದಂಧೆ!
