ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Crime

ಬೈಕ್ ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ, ಧಾರವಾಡಕ್ಕೆ ರವಾನೆ!

Pakka News Web • 26 ಜೂನ್ 2026,

ನಗರದ ಹಳಿಯಾಳ ರಸ್ತೆಯ 3ನೇ ನಂಬರ್ ಗೇಟ್ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸವಾರರು ತೀವ್ರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ದಾಂಡೇಲಿಯ ಕೆ.ಸಿ. ವೃತ್ತದ ಕಡೆಯಿಂದ ಚಲಿಸುತ್ತಿದ್ದ ಬೈಕ್ ಹಾಗೂ ಹಳಿಯಾಳ ರಸ್ತೆಯಿಂದ ಬರುತ್ತಿದ್ದ ಮತ್ತೊಂದು ಬೈಕ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಮೂವರೂ ಸವಾರರು ರಸ್ತೆಗೆ ಬಿದ್ದು ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅಪಘಾತದ ತೀವ್ರತೆಗೆ ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣವೇ ಧಾವಿಸಿ ಗಾಯಾಳುಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ತಕ್ಷಣವೇ ಧಾರವಾಡದ ಆಸ್ಪತ್ರೆಗೆ ರವಾನಿಸಿದ್ದಾರೆ. ಧಾರವಾಡಕ್ಕೆ ದಾಖಲಾದವರನ್ನು ನಗರದ 14ನೇ ಬ್ಲಾಕ್ ನಿವಾಸಿ ಎಬೆಲ್ ನಾಗಯ್ಯ ಮಾದರ ಮತ್ತು ಗಾಂಧಿನಗರದ ನಿವಾಸಿ ವಸೀಪ್ ರಜಾ ಸಲೀಂಮುಲ್ಲಾ ಎಂದು ಗುರುತಿಸಲಾಗಿದೆ. ಇನ್ನು ಅಪಘಾತದಲ್ಲಿ ಗಾಯಗೊಂಡಿರುವ ಮಾರುತಿ ನಗರದ ಮತ್ತೊಬ್ಬ ನಿವಾಸಿ ಜುನೇದ ಬಾಷಾ ಸುಲೇಮಾನ ಇಟಗಿ ಎಂಬಾತನಿಗೆ ಸದ್ಯ ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದ್ದು, ಈತನ ಸ್ಥಿತಿಯೂ ಆತಂಕಕಾರಿಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡಕ್ಕೆ ಕಳುಹಿಸಲಾಗಿದೆ.  ಬೆಳಗ್ಗೆ ಹೊತ್ತಿನಲ್ಲಿ ನಡೆದ ಈ ಭೀಕರ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ದಾಂಡೇಲಿ ನಗರ ಠಾಣೆಯ ಪೊಲೀಸರು ತಕ್ಷಣವೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ವಾಹನಗಳನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250