ಸಿದ್ದಾಪುರ: ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬನ ಆತ್ಮಹತ್ಯೆ ಪ್ರಕರಣಕ್ಕೆ ಈಗ ಮಹತ್ವದ ಟ್ವಿಸ್ಟ್ ಸಿಕ್ಕಿದ್ದು, ವಸತಿ ಶಾಲೆಯ ಶಿಕ್ಷಕ ಅಬು ತಹಲ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 9 ರಂದು ನಡೆದಿದ್ದ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡನ ನಿಗೂಢ ಸಾವಿನ ಕುರಿತು ಆತನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಾಗ ಈ ಆಘಾತಕಾರಿ ಸತ್ಯ ಹೊರಬಂದಿದೆ.

ಮೃತ ವಿದ್ಯಾರ್ಥಿ ಗೋಕುಲ ಕೃಷ್ಣನ ಮೇಲೆ ಶಿಕ್ಷಕ ಅಬು ತಹಲ ಈ ಹಿಂದೆ ಹಲ್ಲೆ ನಡೆಸಿದ್ದ ಎನ್ನುವ ವಿಷಯ ಪೊಲೀಸರ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮೂವರು ಪೊಲೀಸ್ ಅಧಿಕಾರಿಗಳ ನೇತೃತ್ವದ ತಂಡ ಪ್ರಕರಣದ ಆಳವಾದ ತನಿಖೆ ನಡೆಸುತ್ತಿದ್ದು, ಸದ್ಯ ಡಿಎಸ್ಪಿ ಗಿರೀಶ್ ಅವರ ನೇತೃತ್ವದಲ್ಲಿ ಆರೋಪಿ ಶಿಕ್ಷಕನನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಜರುಗಿಸಲಾಗಿದೆ.
