ಅಕ್ಟೋಬರ್ 25, 2026
ಭಾನುವಾರ

ನಮ್ಮನ್ನು ಅನುಸರಿಸಿ

Sports-Cinema

ಬಾಲಮಂದಿರದ ಪೂರ್ವಿ ಹರಿಕಂತ್ರ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಪ್ರಥಮ ಸ್ಥಾನ :ರಾಜ್ಯಮಟ್ಟಕ್ಕೆ ಆಯ್ಕೆ

Pakka News Web • 22 ಆಕ್ಟೋ 2026,

ಕಾರವಾರ:ಕಾರವಾರ ಎಜ್ಯುಕೇಷನ್ ಸೊಸೈಟಿಯ ಬಾಲಮಂದಿರ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂರ್ವಿ ಟಿ. ಹರಿಕಂತ್ರ ಅವರು 17 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಅಮೋಘ ಸಾಧನೆಗೈದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಮುರ್ಡೇಶ್ವರದ ಬೀನಾವೈದ್ಯ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಪೂರ್ವಿ ಅವರು 100 ಮೀಟರ್, 200 ಮೀಟರ್ ಹಾಗೂ 200 ಮೀಟರ್ ಓಟದ ಸ್ಪರ್ಧೆಗಳಲ್ಲಿ ಮತ್ತು 4100 ಮೀಟರ್ ರಿಲೇ ಮತ್ತು 4400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ವೈಯಕ್ತಿಕ ಚಾಂಪಿಯನ್ಶಿಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಅವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಪೂರ್ವಿ ಅವರ ಈ ಗಮನಾರ್ಹ ಸಾಧನೆಗೆ ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ, ಕಾರವಾರ ಎಜ್ಯುಕೇಷನ್ ಸೊಸೈಟಿಯ ಅಧ್ಯಕ್ಷ ಎಸ್. ಪಿ. ಕಾಮತ್, ಉಪಾಧ್ಯಕ್ಷ ಅನಿರುದ್ಧ ಹಳದಿಪುರಕರ, ಕಾರ್ಯದರ್ಶಿ ಆರ್. ಎಸ್. ಹಬ್ಬು, ಹೆಚ್ಚುವರಿ ಕಾರ್ಯದರ್ಶಿ ಹಾಗೂ ಆಡಳಿತಾಧಿಕಾರಿ ಜಿ. ಪಿ. ಕಾಮತ್, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250