ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

State-National

BPL: ಇನ್ಮುಂದೆ ಲಕ್ಷ ದಾಟಿದ್ರೂ ಬಿಪಿಎಲ್ ರದ್ದಾಗಲ್ಲ! ಸರ್ಕಾರದ ಮಹತ್ವದ ಅಭಯ

Pakka News Web • 26 ಜುಲೈ 2026,

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಹಾಗೂ ಹೊಸದಾಗಿ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಲು ಕಾಯುತ್ತಿರುವ ಲಕ್ಷಾಂತರ ಜನರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಬಿಪಿಎಲ್ ಕಾರ್ಡ್ ಪಡೆಯಲು ಇರುವ ವಾರ್ಷಿಕ ಆದಾಯದ ಮಿತಿಯನ್ನು ಈಗಿರುವ 1.20 ಲಕ್ಷ ರೂಪಾಯಿಗಳಿಂದ ಬರೋಬ್ಬರಿ 3 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲು ಮಹತ್ವದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿರುವ ಬಗ್ಗೆ ವರದಿಯಾಗಿದೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಅವರ ನೇತೃತ್ವದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು ಈ ವಿಷಯವನ್ನು ಪ್ರಕಟಿಸಿದರು. ಆಡಳಿತ ಸುಧಾರಣಾ ಆಯೋಗ ನೀಡಿದ ಶಿಫಾರಸಿನ ಆಧಾರದ ಮೇಲೆ ಸರ್ಕಾರದ ಹಂತದಲ್ಲಿ ಈ ಪ್ರಕ್ರಿಯೆ ಚುರುಕಿನಿಂದ ನಡೆಯುತ್ತಿದ್ದು, ಇದರಿಂದ ಮಧ್ಯಮ ವರ್ಗದ ಹಾಗೂ ಶ್ರಮಿಕ ವರ್ಗದ ಬಹುದೊಡ್ಡ ಜನಸಂಖ್ಯೆಗೆ ಅನುಕೂಲವಾಗಲಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ರಾಜ್ಯದಲ್ಲಿ ಪ್ರಸ್ತುತ ‘ಅನ್ನಭಾಗ್ಯ’ ಯೋಜನೆಯಡಿ ಸುಮಾರು 4.42 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು 10 ಕೆಜಿ ಪಡಿತರ ವಿತರಿಸಲಾಗುತ್ತಿದೆ. ಈ ಮೂಲಕ ರಾಜ್ಯವನ್ನು ಸಂಪೂರ್ಣ ‘ಹಸಿವು ಮುಕ್ತ’ಗೊಳಿಸುವ ಸಂಕಲ್ಪವನ್ನು ಸರ್ಕಾರ ಈಡೇರಿಸಿದೆ ಎಂದಿದ್ದಾರೆ. ಈ ಬಗ್ಗೆ ಮುಂದಿನ ಆದೇಶ ಶೀಘ್ರವೇ ಆಗಲಿದೆ ಎನ್ನುವ ನಿರೀಕ್ಷೆ ಇದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250