ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

State-National

ಗ್ರಾಹಕರಿಗೆ ಯುಪಿಐ ಸಂಪೂರ್ಣ ಉಚಿತ: ಕೇಂದ್ರ ಸರ್ಕಾರ ಸ್ಪಷ್ಟನೆ

Pakka News Web • 9 ಆಗಸ್ಟ್ 2026,

 ಪಾವತಿ ಮತ್ತು ಇತ್ಯರ್ಥ ವ್ಯವಸ್ಥೆಗಳ ಕಾಯಿದೆಗೆ ತಿದ್ದುಪಡಿ ತಂದ ನಂತರ ಯುಪಿಐ (UPI) ವಹಿವಾಟುಗಳ ಮೇಲೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ ಎಂಬ ವದಂತಿಗಳಿಗೆ ಕೇಂದ್ರ ಹಣಕಾಸು ಸಚಿವಾಲಯ ತೆರೆ ಎಳೆದಿದೆ.

ಸಾಮಾನ್ಯ ಗ್ರಾಹಕರಿಗೆ ಹಾಗೂ ಸಣ್ಣ ವ್ಯಾಪಾರಿಗಳಿಗೆ ಯುಪಿಐ ಸೇವೆಗಳು ಎಂದಿನಂತೆ ಸಂಪೂರ್ಣ ಉಚಿತವಾಗಿಯೇ ಮುಂದುವರಿಯಲಿವೆ ಎಂದು ಸರ್ಕಾರ ಅಧಿಕೃತವಾಗಿ ಸ್ಪಷ್ಟಪಡಿಸಿದೆ.

ಒಂದೊಮ್ಮೆ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಜಾರಿಗೆ ಬಂದರೂ, ಅದು ಕೇವಲ ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ವಹಿವಾಟು ನಡೆಸುವ ದೊಡ್ಡ ಮಟ್ಟದ ವ್ಯಾಪಾರಿಗಳಿಗೆ ಮಾತ್ರ ಅನ್ವಯಿಸಲಿದೆ. ಈ ದರವು ಪ್ರಸ್ತುತ ಇರುವ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್‌ಗಳ ಶುಲ್ಕಕ್ಕೆ ಹೋಲಿಸಿದರೆ ತೀರಾ ಕಡಿಮೆಯಿರಲಿದ್ದು, ಎನ್ ಪಿಸಿಐ (NPCI) ನೇತೃತ್ವದ ತಜ್ಞರ ಸಮಿತಿಯು ಇದನ್ನು ಅಂತಿಮಗೊಳಿಸಲಿದೆ.

ಯುಪಿಐ ತಂತ್ರಜ್ಞಾನದ ಸುಸ್ಥಿರತೆ ಕಾಯ್ದುಕೊಳ್ಳುವುದು, ಸೈಬರ್ ಭದ್ರತೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಮೂಲಸೌಕರ್ಯಗಳನ್ನು ವಿಸ್ತರಿಸುವ ಉನ್ನತ ಉದ್ದೇಶದಿಂದ ಕಾಯಿದೆಗೆ ತಿದ್ದುಪಡಿ ತರಲಾಗಿದೆಯೇ ಹೊರತು, ಸಾರ್ವಜನಿಕರು ಅಥವಾ ಬಳಕೆದಾರರ ಮೇಲೆ ಯಾವುದೇ ಆರ್ಥಿಕ ಹೊರೆ ಹೇರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಚಿವಾಲಯ ವಿವರಿಸಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250