ಕಾರವಾರ:ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಸೋಮವಾರ ಬೆಂಗಳೂರಿನ ಕೆ. ಸಿ. ಜನರಲ್ ಆಸ್ಪತ್ರೆಯ ಮುಂಭಾಗ ಇರುವ ಸರಕಾರಿ ಶಾಲೆ ಸಮೀಪ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಚಾಲನೆ ನೀಡಿದ ತಿರಂಗಾ ಯಾತ್ರೆಯಲ್ಲಿ ಅಭಿಯಾನದ ರಾಜ್ಯ ಸಂಚಾಲಕಿ ರೂಪಾಲಿ ಎಸ್ ನಾಯ್ಕ ಪಾಲ್ಗೊಂಡರು.

ಮಲ್ಲೇಶ್ವರಂನ 18 ನೇ ಕ್ರಾಸ್ ಆಟದ ಮೈದಾನದವರೆಗೆ ನಡೆದ ಬೃಹತ್ ಯಾತ್ರೆಯಲ್ಲಿ ನಮ್ಮ ಹೆಮ್ಮೆಯ ತ್ರಿವರ್ಣ ಧ್ವಜ ಹಿಡಿದು ನೂರಾರು ಕಾರ್ಯಕರ್ತರು ಮತ್ತು ದೇಶಭಕ್ತ ನಾಗರಿಕರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ವಿಪಕ್ಷ ನಾಯಕರಾದ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಸಹ ಉಸ್ತುವಾರಿಗಳಾದ ಸುಧಾಕರ್ ರೆಡ್ಡಿ, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್, ರಾಜ್ಯ ಉಪಾಧ್ಯಕ್ಷರಾದ ಮಾಳವಿಕಾ ಅವಿನಾಶ್, ಶಾಸಕರಾದ ಕೆ. ಗೋಪಾಲಯ್ಯ, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

.
