ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

State-National

ಊರಿಗೆ ಬರಬೇಕಾ? ವಿಶೇಷ ಸಾರಿಗೆ ವ್ಯವಸ್ಥೆ ಇದೆ

Pakka News Web • 13 ಆಗಸ್ಟ್ 2026,

ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಂತ್ಯದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ವಾ.ಕ.ರ.ಸಾ.ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಿವೆ.


ಆ.14 ಮತ್ತು 15 ರಂದು ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣದಿಂದ 130 ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ.

ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡಿಸಿಕೊಳ್ಳುವದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250