ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Trending

ಜಿಲ್ಲೆಯ ಗ್ರಾ.ಪಂ. ಸದಸ್ಯ ಸ್ಥಾನ–ಮೀಸಲಾತಿ ಬಗ್ಗೆ ಪ್ರಮುಖ ಮಾಹಿತಿ

Pakka News Web • 8 ಜುಲೈ 2026,

ಕಾರವಾರ: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ 2026ಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ 12 ತಾಲೂಕುಗಳ 228 ಗ್ರಾಮ ಪಂಚಾಯತ್‌ಗಳಿಗೆ ವರ್ಗಾವಾರು ಸದಸ್ಯ ಸ್ಥಾನಗಳ ಸಂಖ್ಯೆ ಹಾಗೂ ಮೀಸಲಾತಿಯನ್ನು ಜಿಲ್ಲಾಡಳಿತ ನಿಗದಿಪಡಿಸಿದೆ.
ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 5 ಅನ್ವಯ ಈ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಇದರಂತೆ ಕೊಷ್ಠಕ-1ರಲ್ಲಿ ಗ್ರಾಮ ಪಂಚಾಯತ್ ಕ್ಷೇತ್ರಗಳು, ಕ್ಷೇತ್ರಗಳ ವ್ಯಾಪ್ತಿ ಹಾಗೂ ಪ್ರತಿ ಕ್ಷೇತ್ರಕ್ಕೆ ನಿಗದಿಪಡಿಸಿರುವ ಸದಸ್ಯ ಸ್ಥಾನಗಳ ಸಂಖ್ಯೆಯನ್ನು ಉಲ್ಲೇಖಿಸಲಾಗಿದ್ದು, ಕೊಷ್ಠಕ-2ರಲ್ಲಿ ಸಂಬಂಧಿತ ಕ್ಷೇತ್ರಗಳಿಗೆ ಮೀಸಲಿರಿಸಲಾದ ಸದಸ್ಯ ಸ್ಥಾನಗಳ ವಿವರಗಳನ್ನು ಪ್ರಕಟಿಸಲಾಗಿದೆ.
ಈ ಕುರಿತು ಜುಲೈ 7ರಂದು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಎಲ್ಲಾ 12 ತಾಲೂಕುಗಳ ವ್ಯಾಪ್ತಿಯ 228 ಗ್ರಾಮ ಪಂಚಾಯತ್‌ಗಳಿಗೆ ಈ ನಿಗದಿ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250