ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Trending

ಗೃಹಲಕ್ಷ್ಮಿ ಯೋಜನೆ ಬಗ್ಗೆ ಮತ್ತೊಂದು ಅಪ್ಡೇಟ್!

Pakka News Web • 16 ಜುಲೈ 2026,

ಕಾರವಾರ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ (e-KYC) ಅಪ್ಡೇಟ್ ಮಾಡಿಸಬೇಕು ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ಬಂದಿಲ್ಲ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ಪಿ. ನಾಯ್ಕ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಯಶಸ್ವಿಯಾಗಿ ಬ್ಯಾಂಕ್ ಖಾತೆಗೆ ಹಣ ಜಮೆಯಾಗುತ್ತಿರುವ ಮಹಿಳೆಯರು ಯಾವುದೇ ಸೈಬರ್ ಸೆಂಟರ್ ಅಥವಾ ಸೇವಾ ಕೇಂದ್ರಗಳಿಗೆ ಅಲೆಯುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 3,12,818 ಅರ್ಹ ಫಲಾನುಭವಿಗಳ ಗುರಿ ಹೊಂದಲಾಗಿದ್ದು, ಈಗಾಗಲೇ ನೋಂದಣಿಯಾಗಿರುವ ಮಹಿಳೆಯರಿಗೆ 2026ರ ಏಪ್ರಿಲ್ ತಿಂಗಳವರೆಗಿನ ಹಣವನ್ನು ಡಿಬಿಟಿ ಮೂಲಕ ಯಶಸ್ವಿಯಾಗಿ ಪಾವತಿಸಲಾಗಿದೆ. ಆದರೆ ಇತ್ತೀಚೆಗೆ ಯೂಟ್ಯೂಬ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿರುವ ತಪ್ಪು ಮಾಹಿತಿಯನ್ನು ನಂಬಿ, ಇ-ಕೆವೈಸಿ ಮಾಡಿಸಲು ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು ಹಾಗೂ ಗ್ರಾಮ ಒನ್ ಕೇಂದ್ರಗಳಿಗೆ ಮುಗಿಬೀಳುತ್ತಿರುವುದು ಗಮನಕ್ಕೆ ಬಂದಿದೆ.

ಈ ಕುರಿತು ಇಲಾಖೆಯಿಂದ ಯಾವುದೇ ಹೊಸ ಮಾರ್ಗಸೂಚಿ ಪ್ರಕಟವಾಗಿಲ್ಲ. ಪ್ರಸ್ತುತ ಯಾವುದೇ ಅಡಚಣೆಯಿಲ್ಲದೇ ಹಣ ಪಡೆಯುತ್ತಿರುವ ಫಲಾನುಭವಿಗಳು ಇಂತಹ ಸುಳ್ಳು ವದಂತಿಗಳನ್ನು ನಂಬಿ ಗೊಂದಲಕ್ಕೀಡಾಗಬಾರದು ಎಂದು ಸತೀಶ್ ನಾಯ್ಕ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250