ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಹಣ ವಾಪಸ್ ಬೇಕಾ? ಹೀಗೆ ಮಾಡಿ

Pakka News Web • 1 ಜುಲೈ 2026,

ಸಾಂದರ್ಭಿಕ ಚಿತ್ರ

ಕಾರವಾರ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಸುವ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಆದೇಶಿಸಿರುವ ಸರ್ಕಾರ, ಈಗಾಗಲೇ ಹಣ ಪಾವತಿಸಿ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಆ ಮೊತ್ತವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಲು ಹಸಿರು ನಿಶಾನೆ ನೀಡಿದೆ.

ಈಗಾಗಲೇ ಸೇವಾಸಿಂಧು ಪೋರ್ಟಲ್ ಮೂಲಕ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆದುಕೊಂಡಿರುವ ವಿದ್ಯಾರ್ಥಿಗಳು, ತಮ್ಮ ಹಣವನ್ನು ವಾಪಸ್ ಪಡೆಯಲು ಯಾವುದೇ ಸಾರಿಗೆ ಕಚೇರಿ ಅಥವಾ ಕೌಂಟರ್‌ಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ಬದಲಿಗೆ, ವಿದ್ಯಾರ್ಥಿಗಳು ಮನೆಯಲ್ಲೇ ಕುಳಿತು ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಸುಲಭವಾಗಿ ಹಣವನ್ನು ಮರುಪಾವತಿ ಮಾಡಿಕೊಳ್ಳಬಹುದು.

ಹಣ ವಾಪಸ್ ಪಡೆಯುವುದು ಹೇಗೆ? ವಿದ್ಯಾರ್ಥಿಗಳು ಸರ್ಕಾರದ ಅಧಿಕೃತ ಸೇವಾಸಿಂಧು ಪೋರ್ಟಲ್ ಲಿಂಕ್ https://sevasindhuservices.karnataka.gov.in/buspassservices/ ಗೆ ಭೇಟಿ ನೀಡಿ, ಅಲ್ಲಿ ನೀಡಿರುವ ಲಿಂಕ್ ಮೂಲಕ ತಮ್ಮ ಮೊಬೈಲ್ ಸಂಖ್ಯೆ ಮತ್ತು ಒಟಿಪಿ (OTP) ನಮೂದಿಸಿ ಅರ್ಜಿ ಸಲ್ಲಿಸಬೇಕು. ಈ ವೇಳೆ ಆಧಾರ್ ಆಧಾರಿತ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ತಂತ್ರಾಂಶದಲ್ಲಿ ವಿದ್ಯಾರ್ಥಿಗಳು ತಮ್ಮ ಅಥವಾ ತಮ್ಮ ಪೋಷಕರ ಬ್ಯಾಂಕ್ ಖಾತೆಯ ನಿಖರ ವಿವರಗಳನ್ನು ದಾಖಲಿಸಿ ಅರ್ಜಿಯನ್ನು ಸಬ್ಮಿಟ್ ಮಾಡಬೇಕು.

7 ದಿನಗಳಲ್ಲಿ ಹಣ ಜಮಾ! ಅರ್ಜಿ ಸಲ್ಲಿಸಿದ ಕೇವಲ 7 ದಿನಗಳ ಒಳಗಾಗಿ ವಿದ್ಯಾರ್ಥಿ ಪಾಸಿನ ಮೊತ್ತವು NEFT ಅಥವಾ RTGS ಮೂಲಕ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಆನ್‌ಲೈನ್ ಮೂಲಕ ಜಮೆಯಾಗಲಿದೆ. ಹಣ ಯಶಸ್ವಿಯಾಗಿ ಜಮೆಯಾದ ತಕ್ಷಣ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ (SMS) ಸಂದೇಶ ಕೂಡ ಬರಲಿದೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಸರ್ಕಾರದ ಈ ಡಿಜಿಟಲ್ ಹೆಜ್ಜೆಯಿಂದಾಗಿ ವಿದ್ಯಾರ್ಥಿಗಳಿಗೆ ಕೌಂಟರ್‌ಗಳ ಮುಂದೆ ಕ್ಯೂ ನಿಲ್ಲುವ ಸಮಯ ಮತ್ತು ಶ್ರಮ ಎರಡೂ ಉಳಿತಾಯವಾಗಲಿದೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250