ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ಜಿಲ್ಲೆಯಾದ್ಯಂತ ಒಟ್ಟು 10,88,570 ಎನ್ಯುಮರೇಷನ್ ಫಾರ್ಮ್ ವಿತರಣೆ : ಜಿಲ್ಲಾಧಿಕಾರಿ

Pakka News Web • 5 ಜುಲೈ 2026,

 ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 (SIR) ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು,11,58,776 ಮಂದಿಯ ಮ್ಯಾಪಿಂಗ್ ಮಾಡಿದ್ದು, ಇದುವರೆಗೂ ಜಿಲ್ಲೆಯಾದ್ಯಂತ ಒಟ್ಟು 10,88,570 ಎನ್ಯುಮರೇಷನ್ ಫಾರ್ಮ್ ಗಳನ್ನು ವಿತರಿಸಲಾಗಿದ್ದು,25289 ಫಾರ್ಮ್ ಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ತಿಳಿಸಿದ್ದಾರೆ. ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬ0ಧಿಸಿದ0ತೆ ಒಟ್ಟು 528 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 79 ಶಾಶ್ವತ ವಲಸೆ ಹಾಗೂ 423 ಮರಣ ಹೊಂದಿದ ಪ್ರಕರಣಗಳು, 22 ದ್ವಿಪ್ರತಿಗಳು ಸೇರಿವೆ ಎಂದು ತಿಳಿಸಿದ್ದಾರೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250