ಕಾರವಾರ: ಮಾಜಿ ಸಂಸದರು, ವಿಧಾನ ಪರಿಷತ್‌ನ ವಿರೋಧ ಪಕ್ಷದ ಮಾಜಿ ನಾಯಕರು ಹಾಗೂ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷರಾದ ವಿ.ಎಸ್. ಉಗ್ರಪ್ಪ ಅವರು ಜುಲೈ 12ರಂದು ಕಾರವಾರಕ್ಕೆ ಭೇಟಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಮತ್ತು ಉದ್ಯೋಗ ಮೀಸಲಾತಿ ಒದಗಿಸಬೇಕೆಂಬ ಉದ್ದೇಶದ ಕುರಿತು ಸಮುದಾಯದ ಮುಖಂಡರು ಹಾಗೂ ಸದಸ್ಯರೊಂದಿಗೆ ಚಿಂತನ-ಮಂಥನ ಸಭೆ ನಡೆಸಲಿದ್ದಾರೆ. ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯ ಜನಸಂಖ್ಯೆ ಶೇ.17.1 ಹಾಗೂ ಪರಿಶಿಷ್ಟ ಪಂಗಡದ ಜನಸಂಖ್ಯೆ ಶೇ.6.95ರಷ್ಟಿದ್ದು, ಈ ಸಮುದಾಯಗಳಿಗೆ ಸಮರ್ಪಕ ಪ್ರತಿನಿಧಿತ್ವ ಮತ್ತು ಮೀಸಲಾತಿ ದೊರೆಯುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.
ಕಾರವಾರದ ಕನ್ನಡ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಾಯಕರು, ಮುಖಂಡರು ಮತ್ತು ಸಮುದಾಯದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಪರಿಶಿಷ್ಟ ಪಂಗಡ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಗಣೇಶ್ ಬಿಷ್ಠಣ್ಣ ಹಾಗೂ ಉತ್ತರ ಕನ್ನಡ ಜಿಲ್ಲಾ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಪರಿಶಿಷ್ಟ ಪಂಗಡಗಳ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ತಳವಾರ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
