ಕಾರವಾರ ಉಪ ವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಪರಿವರ್ತಕ ಕೇಂದ್ರ ಕಾಮಗಾರಿಯ ಕಾರಣ ಕೆಎಚ್ಬಿ, ಕೋಡಿಭಾಗ ಫೀಡರಿನ ವಿವಿಧ ಭಾಗಗಳಲ್ಲಿ ಜು. 15 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ ಪ್ರಕಟಣೆ ತಿಳಿಸಿದೆ.
ಹೊನ್ನಾವರ
ಹೆಸ್ಕಾಂ, ಹೊನ್ನಾವರ ವಿಭಾಗ ವ್ಯಾಪ್ತಿಯ 110 ಕೆ.ವಿ ಕುಮಟಾ-ಹೊನ್ನಾವರ ವಿದ್ಯುತ್ ಮಾರ್ಗದ ಸಮೀಪ ಬೀಳುವ ಸ್ಥಿತಿಯಲ್ಲಿರುವ ಮರದ ರೆಂಬೆಗಳನ್ನು ತೇರವುಗೊಳಿಸುವ ಹಾಗೂ ನಿರ್ವಹಣಾ ಕಾರ್ಯ ಇರುವುದರಿಂದ ಜು. 15 ರಂದು ಬೆಳಗ್ಗೆ 10 ಗಂಟೆಯಿAದ ಮಧ್ಯಾಹ್ನ 12 ಗಂಟೆಯವರೆಗೆ ಹೊನ್ನಾವರ ಹಾಗೂ ಭಟ್ಕಳ ತಾಲೂಕು ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೊನ್ನಾವರ ಹೆಸ್ಕಾಂ, ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ್(ವಿ)ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
