ಕಾರವಾರ:ಪ್ರಸಕ್ತ ಸಾಲಿಗೆ ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪಾಲಿಟೆಕ್ನಿಕ್ ಕಾರವಾರದಲ್ಲಿ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಕೌನ್ಸಿಲಿಂಗ್ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀಕೃತ ವೆಬ್ಸೈಟ್ https://dtetech.karnataka.gov.in/ ಅಥವಾ ಸಂಸ್ಥೆಯ ಪ್ರಿನ್ಸಿಪಾಲರ ದೂ.ಸಂ: 9448995682 ಹಾಗೂ ಕಚೇರಿಯ ದೂ ಸಂ: 08382-226343 ನ್ನು ಸಂಪಕಿಸುವಂತೆ ಸರ್ಕಾರಿ ಪಾಲಿಟೆಕ್ನಿಕ್ ಪ್ರಿನ್ಸಿಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
