ಅಂಕೋಲಾ ತಾಲೂಕಿನಾದ್ಯಂತ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸೇರಿದಂತೆ ಅಂಗನವಾಡಿಗಳಿಗೆ ಶುಕ್ರವಾರ ರಜೆಯನ್ನು ಅಂಕೋಲಾ ತಹಸೀಲ್ದಾರ್ ಘೋಷಿಸಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಂಕೋಲಾ ತಹಸೀಲ್ದಾರ್ ತಿಳಿಸಿದ್ದಾರೆ. ಪಾಲಕರು ಹಾಗೂ ಶಾಲಾ ಆಡಳಿತ ಮಂಡಳಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಂಕೋಲಾ ತಹಸೀಲ್ದಾರ್ ಅವರು ಮನವಿ ಮಾಡಿದ್ದಾರೆ.
ಸತತ ಮಳೆ: ಈ ತಾಲೂಕಿನ ಶಾಲೆಗಳಿಗೆ ಇಂದು ರಜೆ
