ಕೆಲವು ವರ್ಷಗಳ ಹಿಂದೆ ಉತ್ತರ ಕನ್ನಡದ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಐಎಎಸ್ ಅಧಿಕಾರಿ ಎಸ್. ಎಸ್. ನಕುಲ್ ಅವರನ್ನು ಕರ್ನಾಟಕದ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಮೊದಲು ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಉತ್ತಮ ಕಾರ್ಯ ನಿರ್ವಹಣೆಗೆ ಹೆಸರಾಗಿದ್ದ ಅವರು ಬಳಿಕ ಕೇಂದ್ರ ವಿತ್ತ ಸಚಿವರ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. ಇವರ ಕಾರ್ಯ ನಿರ್ವಹಣೆ ಗಮನಿಸಿ ಇದೀಗ ಕರ್ನಾಟಕ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಕಾರ್ಯದರ್ಶಿ ಆಗಿ ನೇಮಕ ಮಾಡಿದ್ದಾರೆ.
