ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ಪತ್ರಕರ್ತರ ವೇದಿಕೆಯ ಜಿಲ್ಲಾಧ್ಯಕ್ಷರಾಗಿ ದಿವಾಕರ ನಾಯ್ಕ ಸಂಪಖಂಡ ನೇಮಕ

Pakka News Web • 21 ಜುಲೈ 2026,

ಸಿದ್ದಾಪುರ:ಪತ್ರಕರ್ತರ ವೇದಿಕೆ (ರಿ.) ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ದಿವಾಕರ ನಾಯ್ಕ್ ಸಂಪಖಂಡ ಅವರನ್ನು ನೇಮಕಗೊಳಿಸಿ, ರಾಜ್ಯ ಘಟಕದ ಅಧ್ಯಕ್ಷ ಮಹೇಶ ಬಾಬು ಸುರ್ವೆ ಆದೇಶ ಹೊರಡಿಸಿದ್ದಾರೆ.

ಕಳೆದ ಎಂಟು ವರ್ಷಗಳಿಂದ ಸಿದ್ದಾಪುರ ತಾಲೂಕಿನಲ್ಲಿ ವಿವಿಧ ಮುದ್ರಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ದಿವಾಕರ ನಾಯ್ಕ್, ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಮಾಧ್ಯಮ ಕ್ಷೇತ್ರದ ಜೊತೆಗೆ ನಾಡು-ನುಡಿಯ ರಕ್ಷಣೆ, ಕಲೆ, ಕ್ರೀಡೆ ಹಾಗೂ ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ವಿವಿಧ ಸಂಘ-ಸಂಸ್ಥೆಗಳೊಂದಿಗೆ ಕೈಜೋಡಿಸಿ ಹಲವು ರಂಗಗಳಲ್ಲಿ ನೀಡಿದ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಈ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ.

೨೦೨೬ ರಿಂದ ೨೦೨೯ ರ ಅವಧಿಗೆ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಅವರು, ಶೀಘ್ರದಲ್ಲೇ ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಮಿಟಿಗಳನ್ನು ರಚಿಸಿ ಸಂಘಟನೆಯನ್ನು ಬಲಪಡಿಸಬೇಕಿದೆ. ಸಮಾಜದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಧ್ವನಿಯಾಗುತ್ತಾ, ಸಂಕಷ್ಟದಲ್ಲಿರುವ ನೊಂದವರಿಗೆ ನ್ಯಾಯ ಒದಗಿಸುವ ದಿಸೆಯಲ್ಲಿ ತಮ್ಮ ಸೇವೆಯನ್ನು ಹೀಗೆಯೇ ಮುಂದುವರಿಸಿಕೊಂಡು ಹೋಗುವಂತೆ ರಾಜ್ಯ ಅಧ್ಯಕ್ಷರು ತಮ್ಮ ಆದೇಶದಲ್ಲಿ ಸೂಚಿಸಿದ್ದಾರೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250