ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯ ವೇತನ: ಅರ್ಜಿ ಸಲ್ಲಿಸಿ!

Pakka News Web • 24 ಜುಲೈ 2026,

ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೋಮಾ ಮತ್ತು ವೃತಿಪರ ಪದವಿವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲನಿವಾಸಿ ಮಿಲಿಟರಿ ಪಿಂಚಣಿದಾರ, ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತು ಪಡಿಸಿ) ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಅರ್ಹ ಮಾಜಿ ಸೈನಿಕರ ಮಕ್ಕಳು, ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಕಾರವಾರ ಇವರನ್ನು ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆಯನ್ನು ಅಕ್ಟೋಬರ್ 31 ರೊಳಗಾಗಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 30 ರೊಳಗಾಗಿ ನೀಡಬೇಕು.
ಮಾಜಿ ಸೈನಿಕರು ತಮ್ಮ ಮಕ್ಕಳ ಶಿಷ್ಯವೇತನ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-226538 ಮೂಲಕ ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250