ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಶಾಸಕರ ಮಾದರಿ ಶಾಲೆಗೆ ತಾವು ನೀಡಿದ ಅನುದಾನ ಸಾರ್ಥಕವಾಗಿದೆ ರೂಪಾಲಿ ನಾಯ್ಕ

Pakka News Web • 29 ಜುಲೈ 2026,

ಶಿಕ್ಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ 

ಕಾರವಾರ:ಗುರು ಪೂರ್ಣಿಮೆ ಶುಭ ಸಂದರ್ಭದಲ್ಲಿ ಕಾರವಾರ ನಗರದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಅವರು ಗುರುಗಳಿಗೆ ಗೌರವ ನೀಡಿ, ವಿದ್ಯಾರ್ಥಿಗಳನ್ನು ಅಕ್ಕರೆಯಿಂದ ಕಂಡು ತಾವು ಶಾಸಕರಾಗಿದ್ದಾಗ ಶಾಲೆಗೆ ನೀಡಿದ ಅನುದಾನದಲ್ಲಿ ನೂತನ ಕಟ್ಟಡ ನಿರ್ಮಾಣವಾಗಿದ್ದು ನೋಡಿ ಸಂತಸ ವ್ಯಕ್ತಪಡಿಸಿದರು.

ಶಾಸಕರ ಮಾದಿರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ, ವಿವಿಧ ಕೊಠಡಿಗಳು ಹಾಗೂ ಶಾಲೆಯಲ್ಲಿನ ಮೂಲ ಸೌಕರ್ಯಗಳನ್ನು ಪರಿಶೀಲಿಸಿದರು. ನಾನು ಶಾಸಕಳಾಗಿದ್ದಾಗ ಈ ಶಾಲೆಯ ನೂತನ ಕಟ್ಟಡ ಹಾಗೂ ಅಭಿವೃದ್ಧಿಗಾಗಿ 5 ಕೋಟಿ ರೂಪಾಯಿಗಳ ಅನುದಾನ ನೀಡಿದ್ದೆ. ನೂತನ ಕಟ್ಟಡ ನಿರ್ಮಾಣವಾಗಿ ಆ ಅನುದಾನ ಸಾರ್ಥಕವಾದಂತಾಗಿದೆ. ಇನ್ನೂ ಕೆಲವು ಅಭಿವೃದ್ಧಿ ಕಾಮಗಾರಿಗಳು ಆಗಬೇಕಿತ್ತು. ಮುಂದಿನ ದಿನಗಳಲ್ಲಿ ಶಾಲೆ ಇನ್ನಷ್ಟು ಅಭಿವೃದ್ಧಿ ಕಾಣುವಂತಾಗಲಿ ಎಂದು ಆಶಿಸಿದರು.

ಶಿಕ್ಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ವಿದ್ಯಾರ್ಥಿಗಳೊಂದಿಗೆ ಬೆರೆತು ಅವರ ಕನಸುಗಳು, ಭವಿಷ್ಯದ ಬಗ್ಗೆ ವಿಚಾರ ವಿನಿಯಮ ನಡೆಸಿದರು.

ಈ ಸಂದರ್ಭದಲ್ಲಿ ರೂಪಾಲಿ ಎಸ್.ನಾಯ್ಕ ಮಾತನಾಡಿ, ಉತ್ತಮ ಶಿಕ್ಷಣವೇ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ, ಹೀಗಾಗಿ ವಿದ್ಯಾರ್ಥಿಗಳೆಲ್ಲರೂ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ, ಶಿಕ್ಷಕರನ್ನು ಗೌರವಿಸಿ, ಉತ್ತಮ ಸಂಸ್ಕಾರವನ್ನು ಬೆಳೆಸಿಕೊಂಡು ಸಮಾಜದಲ್ಲಿ ಮಾದರಿ ನಾಗರಿಕರಾಗಿರಿ ಎಂದು ಶಾಲಾ ಮಕ್ಕಳಿಗೆ ಕಿವಿಮಾತು ಹೇಳಿದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ಶುಭ ಹಾರೈಸಿದರು.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250