ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಸಾಧಕರಿಗೆ ನೀಡಲಾಗುವ ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನ ಯೋಜನೆಗಳು ಚಾಲ್ತಿಯಲ್ಲಿವೆ. ಈ ಪೈಕಿ 2026-27ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿ ಹಾಗೂ 2025-26ನೇ ಸಾಲಿನ ಕ್ರೀಡಾ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ. ಅರ್ಹ ಹಾಗೂ ಆಸಕ್ತ ಕ್ರೀಡಾಪಟುಗಳು ಸರ್ಕಾರದ ಅಧಿಕೃತ ‘ಸೇವಾ ಸಿಂಧು’ ಜಾಲತಾಣದ (https://sevasindu.karnataka.gov.in) ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಿವಿಧ ಯೋಜನೆಗಳ ನಿಯಮಗಳು ಹಾಗೂ ಮಾರ್ಗಸೂಚಿಗಳ ವಿವರಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪಡೆದುಕೊಳ್ಳಬಹುದು. ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿ ಅಥವಾ ಗೊಂದಲಗಳಿದ್ದಲ್ಲಿ, ಸಾರ್ವಜನಿಕರು ಕಚೇರಿಯ ಕೆಲಸದ ವೇಳೆಯಲ್ಲಿ ದೂರವಾಣಿ ಸಂಖ್ಯೆ 9480886551 ಅನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ರೀಡಾಪಟುಗಳಿಗೆ ಇನ್ನೊಂದು ಅವಕಾಶ!
