ಕಾರವಾರ:ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ಪರಿಶೀಷ್ಟ ಪಂಗಡದ ಜನಾಂಗದವರಿಗೆ ಸರ್ಕಾರದ ಯೋಜನೆ ಹಾಗೂ ಸವಲತ್ತುಗಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಆಯ್ಕೆಯಾದ ಗ್ರಾಮ ಪಂಚಾಯತ್‌ಗಳಲ್ಲಿ ಆಗಸ್ಟ್ 13 ರಿಂದ 15 ರವರೆಗೆ ಜನ್ ಸುನ್ವಾಯಿ ಕಾರ್ಯಕ್ರಮವನ್ನು ಆಯೋಜಿಸಲು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದಿಂದ ಆದೇಶವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಮಾಹಿತಿ ನೀಡಿದ್ದಾರೆ.
ಅದರಂತೆ ಜಿಲ್ಲೆಯಲ್ಲಿ ಆಯ್ಕೆಯಾದ ಹಳಿಯಾಳ-1, ಜೋಯಿಡಾ-4 ಮತ್ತು ಮುಂಡಗೋಡ-20 ಒಟ್ಟು 25 ಗ್ರಾಮಗಳ ಆದಿ ಸೇವಾ ಕೇಂದ್ರಗಳಲ್ಲಿ ಆಗಸ್ಟ್ 13 ರಿಂದ 15 ರವರೆಗೆ ಜನ್ ಸುನ್ವಾಯಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಆದಾರ ಕಾರ್ಡ್, ರೇಷನ್ ಕಾರ್ಡ್, ಆಯುಷ್ಮಾನ್ ಭಾರತ್ ಕಾರ್ಡ್, ಜಾತಿ ಪ್ರಮಾಣ ಪತ್ರ, ನಿವಾಸ ಪ್ರಮಾಣ ಪತ್ರ, ಪಿ.ಎಂ. ಕಿಸಾನ್ ಕ್ರೆಡಿಟ್ ಕಾರ್ಡ್. ವಿಮಾ ಹಕ್ಕುಗಳು, ಜನಧನ್ ಬ್ಯಾಂಕ್ ಖಾತೆ ಸಾಮಾಜಿಕ ಭದ್ರತೆಗಳಾದ ವೃದ್ದಾಪ್ಯ ಪಿಂಚಣಿ, ವಿಧವಾ ಪಿಂಚಣಿ, ದಿವ್ಯಾಂಗ ಪಿಂಚಣಿ, ಜೀವನೋಪಾಯ ಉದ್ಯೋಗ MGNREGA,, ಪಿ.ಎಂ ವಿಶ್ವಕರ್ಮ ಮುದ್ರಾ ಸಾಲಗಳು, ಪಿ.ಎಂ ಮಾತ್ರವಂಧನ ಯೋಜನೆ, ಐಸಿಡಿಎಸ್ ಸೌಲಭ್ಯಗಳು ಲಸಿಕಕರಣ, Sickle cell anemia ಕುರಿತು ಜಾಗೃತಿ ನೀಡಲಾಗುವುದು.
ಜೊತೆಗೆ ಆರೋಗ್ಯ ತಪಾಷಣೆ, ಆದಿ ಸೇವಾ ಕೇಂದ್ರದಲ್ಲಿ ಸಾರ್ವಜನಿಕ ಅಹವಾಲು ಸ್ವೀಕೃತಿ ಈ ರೀತಿಯ ಎಲ್ಲಾ ಸೌಲಭ್ಯಗಳನ್ನು ಪಡೆಯುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯದೊಂದಿಗೆ ಕಾರ್ಯಕ್ರಮದಲ್ಲಿ ಮಾಹಿತಿಯನ್ನು ನೀಡಲಾಗುತ್ತಿದೆ. ಜಿಲ್ಲೆಯ ಪರಿಶಿಷ್ಟ ಪಂಗಡದ ಜನಾಂಗದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ. ಎಲ್ಲಾ ಸೌಲಭ್ಯಗಳ ಮಾಹಿತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
