ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಗಾಂಧಿನಗರ ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Pakka News Web • 15 ಆಗಸ್ಟ್ 2026,

ಕಾರವಾರ: ನಗರದ ಕೆಬಿ ರಸ್ತೆಯ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 8.30ಕ್ಕೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಉಪಾಧ್ಯಕ್ಷ ಹಾಗೂ ಸಮಾಜ ಸೇವಕ ಬಾಬು ಶೇಖ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ನಗರಸಭೆಯ ಮಾಜಿ ಅಧ್ಯಕ್ಷ ರವಿರಾಜ್ ಅಂಕೋಲೇಕರ, ರಾಜ್ಯ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಂಯೋಜಕ ಸಯ್ಯದ್ ಅಶ್ರಫ್ ಖಾದ್ರಿ, ನಜೀರ ರಾಣೇಬೆನ್ನೂರ, ಶ್ರೀನಿವಾಸ ತಾಂಡೇಲ, ಅಂಗನವಾಡಿ ಕಾರ್ಯಕರ್ತೆ ಮಂಜುಳಾ ಎಸ್. ಕಾಣಕೋಣಕರ, ಸಹಾಯಕಿ ಮುಸ್ಕಾನ್ ಬಾವಾಖಾನ್ ಸೇರಿದಂತೆ ಅಂಗನವಾಡಿ ಕೇಂದ್ರದ ಮಕ್ಕಳು, ಸ್ತ್ರೀ ಸಂಘ ಹಾಗೂ ಸ್ವಸಹಾಯ ಸಂಘಗಳ ಮಹಿಳೆಯರು ಮತ್ತು ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ಸ್ಮರಿಸಲಾಯಿತು. ಅಂಗನವಾಡಿ ಮಕ್ಕಳು ಹಾಗೂ ಸ್ಥಳೀಯ ಮಹಿಳೆಯರು ಸೇರಿದಂತೆ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250