ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಕೇರವಾಡದಲ್ಲಿ ಮರದ ಕೊಂಬೆ ಬಿದ್ದು ರಸ್ತೆ ಬಂದ್

Pakka News Web • 15 ಆಗಸ್ಟ್ 2026,

ದಾಂಡೇಲಿ: ಗಾಳಿ ಮಳೆಗೆ ಬೃಹತ್ ಮರದ ಕೊಂಬೆ ರಸ್ತೆಗೆ ಉರುಳಿ ಬಿದ್ದ ಪರಿಣಾಮ ದಾಂಡೇಲಿ–ಹಳಿಯಾಳ ರಸ್ತೆಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ಶನಿವಾರ ಬೆಳಗಿನ ಜಾವ ಕೇರವಾಡ ಸಮೀಪ ನಡೆದಿದೆ.

ಸುಮಾರು 3 ಗಂಟೆ ವೇಳೆಗೆ ಮರದ ಕೊಂಬೆ ವಿದ್ಯುತ್ ತಂತಿಗಳ ಮೇಲೆಯೂ ಬಿದ್ದಿದ್ದು, ತಂತಿಗಳು ತುಂಡಾಗಿ ರಸ್ತೆಗೆ ಬಿದ್ದಿದ್ದವು. ಇದರಿಂದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳು ಮುಂದಕ್ಕೆ ಸಾಗಲಾಗದೆ, ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು.

ಘಟನೆ ಕುರಿತು ಮಾಹಿತಿ ದೊರೆಯುತ್ತಿದ್ದಂತೆ ಅರಣ್ಯ ಇಲಾಖೆ, ಹೆಸ್ಕಾಂ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಸ್ಥಳೀಯರಾದ ಮುನ್ನಾ ಸಾಂಗ್ಲ ಸೇರಿದಂತೆ ಸಾರ್ವಜನಿಕರ ಸಹಕಾರದೊಂದಿಗೆ ರಸ್ತೆಗೆ ಬಿದ್ದಿದ್ದ ಮರದ ಕೊಂಬೆಗಳನ್ನು ತೆರವುಗೊಳಿಸಲಾಯಿತು. ಬಳಿಕ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಲಾಯಿತು.

ಅಧಿಕಾರಿಗಳು ಮತ್ತು ಸ್ಥಳೀಯರ ತ್ವರಿತ ಕಾರ್ಯಾಚರಣೆಯಿಂದ ಕೆಲವೇ ಗಂಟೆಗಳಲ್ಲಿ ಸಂಚಾರ ಪುನಃ ಆರಂಭಗೊಂಡಿತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250