ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಜಿಲ್ಲೆಯಾದ್ಯಂತ 11,23,004 ಎನ್ಯುಮರೇಷನ್ ಫಾರ್ಮ್ ಗಣಕೀಕರಣ

Pakka News Web • 16 ಆಗಸ್ಟ್ 2026,

 ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ -2026 ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್ ಗಳನ್ನು ವಿತರಿಸಲಾಗಿದೆ.

ಇದುವರೆಗೂ ಜಿಲ್ಲೆಯಾದ್ಯಂತ 11,23,004 ಫಾರ್ಮ್ ಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.  

ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 1,07,033 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 45,638 ಶಾಶ್ವತ ವಲಸೆ ಹಾಗೂ 44,029 ಮರಣ ಹೊಂದಿದ ಪ್ರಕರಣಗಳು 12,689 ದ್ವಿಪ್ರತಿಗಳು ಸೇರಿವೆ ಎಂದು ತಿಳಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250