ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಸೇಫ್ ಸ್ಟಾರ್ ಸೌಹಾರ್ದ ಸಹಕಾರಿಯಿಂದ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಸಿದ್ದಾಪುರ ಶಾಖೆಯಲ್ಲಿ ದೇಶಾಭಿಮಾನದ ಆಚರಣೆ

Pakka News Web • 17 ಆಗಸ್ಟ್ 2026,

ಸಿದ್ದಾಪುರ:ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಪ್ರಧಾನ ಕಚೇರಿ ಹೊಂದಿದ್ದು, ರಾಜ್ಯಾದ್ಯಂತ 20 ಶಾಖೆಗಳ ಮೂಲಕ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಸಿದ್ದಾಪುರ ಶಾಖೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಅತ್ಯಂತ ವಿಜೃಂಭಣೆಯಿಂದ ಆ.15 ರಂದು ಆಚರಿಸಲಾಯಿತು.

ಸಂಸ್ಥೆಯು ಕೇವಲ ವ್ಯವಹಾರ ಅಥವಾ ಲಾಭ ಗಳಿಕೆಗೆ ಮಾತ್ರ ಸೀಮಿತವಾಗದೆ, ಸಾಮಾಜಿಕ ಹೊಣೆಗಾರಿಕೆ ಮತ್ತು ಸದಾ ದೇಶಾಭಿಮಾನದ ಸೇವೆಯಲ್ಲಿ ಮುಂಚೂಣಿಯಲ್ಲಿ ನಿಲ್ಲುವ ಮೂಲಕ ತನ್ನ ನಿಜವಾದ ಧ್ಯೇಯವನ್ನು ನಿರಂತರವಾಗಿ ಸಾಬೀತುಪಡಿಸುತ್ತಾ ಬಂದಿದೆ.

ಈ ಹಿಂದೆ 75ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ‘ಹರ್ ಘರ್ ತಿರಂಗಾ’ ಕರೆಗೆ ಸ್ಪಂದಿಸಿ, ಸಂಸ್ಥೆಯ ಅಧ್ಯಕ್ಷರ ಜಿ. ಜಿ. ಶಂಕರ್ ಅವರ ನೇತೃತ್ವದಲ್ಲಿ ಜಿಲ್ಲೆಯ ಸುಮಾರು 2,000 ಮನೆಗಳಿಗೆ ರಾಷ್ಟ್ರಧ್ವಜದೊಂದಿಗೆ ಸಿಹಿ ತಿಂಡಿ ವಿತರಿಸಿ ಅಪಾರ ದೇಶಪ್ರೇಮ ಮೆರೆದಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದಷ್ಟೇ ಅಲ್ಲದೆ, ಕೋವಿಡ್‌ ಮಹಾಮಾರಿಯ ಸಂದರ್ಭದಲ್ಲಿ ಇಡೀ ವಿಶ್ವವೇ ಸಂಕಷ್ಟದಲ್ಲಿದ್ದಾಗ ಮತ್ತು ದೇಶದ ಜನತೆಗೆ ನೆರವಿನ ಅಗತ್ಯವಿದ್ದಾಗ, ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಗೆ ಓಗೊಟ್ಟು ಸಂಸ್ಥೆಯು ಕೇಂದ್ರ ಸರ್ಕಾರದ ಪರಿಹಾರ ನಿಧಿಗೆ ₹1.50 ಲಕ್ಷ ಹಾಗೂ ರಾಜ್ಯ ಸರ್ಕಾರದ ನಿಧಿಗೆ ₹1 ಲಕ್ಷ ಧನಸಹಾಯ ನೀಡಿತ್ತು.

ಜೊತೆಗೆ, ಸರ್ಕಾರ ಸಂಕಷ್ಟದಲ್ಲಿದ್ದ ಸಮಯದಲ್ಲಿ 20 ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ತಿಂಗಳ ವೇತನದ ಧನಸಹಾಯವನ್ನು ಒದಗಿಸಿ ಆಸರೆಯಾಗಿತ್ತು. ಜಿಲ್ಲೆಯಾದ್ಯಂತ ಸಾವಿರಾರು ಸಾರ್ವಜನಿಕರಿಗೆ ಉಪಹಾರ ಮತ್ತು ಊಟದ ಸೌಕರ್ಯ ಕಲ್ಪಿಸುವ ಮೂಲಕ ಸಂಸ್ಥೆಯು ತನ್ನ ಸಾಮಾಜಿಕ ಬದ್ಧತೆಯನ್ನು ಎತ್ತಿ ಹಿಡಿದಿತ್ತು.

ಅಂತೆಯೇ, ಈ ವರ್ಷವೂ ಸಹ ತನ್ನೆಲ್ಲಾ ಶಾಖೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ದೇಶಾಭಿಮಾನ ಮೆರೆಯುವುದು ನಮ್ಮ ಕರ್ತವ್ಯ ಎಂಬುದನ್ನು ಸಂಸ್ಥೆ ಮತ್ತೊಮ್ಮೆ ನಿರೂಪಿಸಿದೆ.

ಸಿದ್ದಾಪುರ ಶಾಖೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬಿಡಿಸಿ ನಿರ್ದೇಶಕರಾದ ಶ್ರೀ ರಾಮಚಂದ್ರ ನಾರಾಯಣ ಹಳಕಾರ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಖೆಯ ಹಿರಿಯ ವ್ಯವಸ್ಥಾಪಕರಾದ ಶ್ರೀ ನಿಲೇಶ್ ಮೇಸ್ತ ಹಾಗೂ ಶಾಖೆಯ ಸಮಸ್ತ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದು ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾದರು.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250