ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ತಹಸೀಲ್ದಾರ್ ಕಚೇರಿಗೆ ಲೋಕಾಯುಕ್ತ ದಿಢೀರ್ ಭೇಟಿ

Pakka News Web • 18 ಆಗಸ್ಟ್ 2026,

ಕಾರವಾರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಪರಿಶೀಲನೆ ನಡೆಸಿದ್ದು, ಕಚೇರಿಯಲ್ಲಿನ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಬೆಂಗಳೂರಿನಿಂದ ಆಗಮಿಸಿದ ನಾಲ್ವರು ಅಧಿಕಾರಿಗಳ ತಂಡವು ತಹಶೀಲ್ದಾರ್ ನಿಶ್ಚಲ್ ನೊರೊನ್ಹಾ ಅವರ ಕೊಠಡಿಗೆ ತೆರಳಿ ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ. ಈ ವೇಳೆ ಕಚೇರಿಯ ಕೆಲ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಕೆಎ-01-ಜಿ-5857 ನೋಂದಣಿ ಸಂಖ್ಯೆಯ ವಾಹನದಲ್ಲಿ ಆಗಮಿಸಿದ ಲೋಕಾಯುಕ್ತ ತಂಡವು ಕಚೇರಿಯಲ್ಲಿ ಪರಿಶೀಲನೆ ಮುಂದುವರಿಸಿದೆ. ಕಾರ್ಯಾಚರಣೆಗೆ ಕಾರಣವೇನು ಎಂಬುದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. ಇದೇ ರೀತಿ ರಾಜ್ಯ ವಿವಿಧ ಕಡೆ ಲೋಕಾಯುಕ್ತ ಅಧಿಕಾರಿಗಳು ವಿವಿಧ ಕಚೇರಿಗೆ‌ ಭೇಟಿ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250