ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಕಡಲಾಮೆ ಸಾ*ವು!

Pakka News Web • 19 ಆಗಸ್ಟ್ 2026,

ಕಾರವಾರ: ನಗರದ ಟಾಗೋರ್ ಕಡಲತೀರದಲ್ಲಿ ಅಪರೂಪದ ಆಲಿವ್ ರಿಡ್ಲಿ ಜಾತಿಯ ಕಡಲಾಮೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಮುದ್ರ ಜೀವಿಗಳ ಸಂರಕ್ಷಣೆ ಕುರಿತು ಆತಂಕ ಮೂಡಿಸಿದೆ.

ಚಾಪೆಲ್ ವಾರ್ಶಿಪ್ ಮ್ಯೂಸಿಯಂ ಹಿಂಭಾಗದ ಕಡಲತೀರದಲ್ಲಿ ಬುಧವಾರ ಕಡಲಾಮೆ ಪತ್ತೆಯಾಗಿದ್ದು, ಮಾಹಿತಿ ತಿಳಿದ ಅರಣ್ಯ ಇಲಾಖೆ ಹಾಗೂ ಮರೈನ್ ಎಸ್‌ಪಿಎಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

ಕಡಲಾಮೆ ಕೆಲ ದಿನಗಳ ಹಿಂದೆಯೇ ಮೃತಪಟ್ಟಿರುವ ಸಾಧ್ಯತೆಯಿದ್ದು, ದೇಹ ಸಂಪೂರ್ಣ ಕೊಳೆತಿದ್ದರಿಂದ ಸಾವಿನ ನಿಖರ ಕಾರಣ ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಬಳಿಕ ಅಧಿಕಾರಿಗಳ ಸಮ್ಮುಖದಲ್ಲಿ ಕಡಲತೀರದಲ್ಲಿಯೇ ಹೂಳಲಾಯಿತು.

ಸಮುದ್ರದಲ್ಲಿ ಮೀನುಗಾರಿಕೆ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರಿಕಾ ಬಲೆಗೆ ಸಿಲುಕಿ ಅಥವಾ ದೋಣಿಗೆ ಡಿಕ್ಕಿಯಾಗಿ ಮೃತಪಟ್ಟಿರಬಹುದೇ ಎಂಬ ಅನುಮಾನ ವ್ಯಕ್ತವಾಗಿದೆ. ಆದರೆ ಇದನ್ನು ಖಚಿತಪಡಿಸಲು ಸಾಧ್ಯವಾಗಿಲ್ಲ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250