ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Pakka News Web • 2 ಸೆಪ್ಟೆಂ 2026,

ಅಂಕೋಲಾ: ತಾಲೂಕಿನ ಬೆಳಸೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ ವಿಷಯಗಳಲ್ಲಿ ತಲಾ ಒಂದು ಹುದ್ದೆ ಖಾಲಿಯಿದ್ದು, ಎಂ.ಎಸ್‌ಸಿ ಮತ್ತು ಬಿ.ಎಡ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,150 ಗೌರವಧನ ನೀಡಲಾಗುತ್ತದೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಪರಿಚಯ ಪತ್ರ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಬೆಳಸೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜನ್ನು ಸಂಪರ್ಕಿಸುವಂತೆ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9480022044 ಅನ್ನು ಸಂಪರ್ಕಿಸಬಹುದಾಗಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250