ಸೆಪ್ಟೆಂಬರ್ 5, 2026
ಶನಿವಾರ

ನಮ್ಮನ್ನು ಅನುಸರಿಸಿ

Uttara-Kannada

ಇ-ಕೆವೈಸಿ ಬಗ್ಗೆ ರೈತರಿಗೊಂದು ಮಾಹಿತಿ!

Pakka News Web • 4 ಸೆಪ್ಟೆಂ 2026,

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೂ. 2 ಸಾವಿರದಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟೂ ರೂ. 6 ಸಾವಿರ ಸಹಾಯಧನವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ.

ಈ ಯೋಜನೆಯಡಿ ಸಹಾಯಧನ ಪಡೆಯಲು ಪ್ರತಿ ವರ್ಷವೂ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಇ-ಕೆವೈಸಿ ಪೂರ್ಣಗೊಳಿಸಲು ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಹಾಗೂ ಮುಖ ಗುರುತಿಸುವಿಕೆ ಆಧಾರಿತ ಇ-ಕೆವೈಸಿ ಎಂಬ ಎರಡು ವಿಧಾನಗಳಿವೆ.

ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸಿಕೊಳ್ಳಲು ರೈತರು ಹತ್ತಿರದ ಗ್ರಾಹಕ ಸೇವಾ ಕೇಂದ್ರ, ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರದ ಮೂಲಕ ಆಧಾರ ಕಾರ್ಡ್ ಅಥವಾ ಆಧಾರ ಸಂಖ್ಯೆ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ. ಮುಖ ಗುರುತಿಸುವಿಕೆ ಆಧಾರಿತ ಇ–ಕೆವೈಸಿಯನ್ನು ಪಿ.ಎಂ.ಕಿಸಾನ್ ಮೊಬೈಲ್ ಆ್ಯಪ್ ಅಥವಾ ವಿಎನ್ಓ ಆ್ಯಪ್ ಮೂಲಕ ಮಾಡಿಸಿಕೊಳ್ಳಬಹುದಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಒಟ್ಟೂ 1,48,960 ಫಲಾನುಭವಿಗಳ ಇ-ಕೆವೈಸಿ ಮಾಡಿಸುವುದು ಬಾಕಿ ಇದ್ದು, ಅಂಕೋಲಾ- 15,532, ಭಟ್ಕಳ-16,817, ದಾಂಡೇಲಿ-519, ಹಳಿಯಾಳ -12,684, ಹೊನ್ನಾವರ-21,901, ಕಾರವಾರ-9,864, ಕುಮಟಾ 21,722, ಮುಂಡಗೋಡ -8,167, ಸಿದ್ದಾಪುರ -13,749, ಶಿರಸಿ-16,810, ಜೋಯಿಡಾ-4443, ಯಲ್ಲಾಪುರ-6752, ರೈತರು ಕಡ್ಡಾಯವಾಗಿ ಬಯೋಮೆಟ್ರಿಕ ಆಧಾರಿತ ಅಥವಾ ಪಿ.ಎಂ.ಕಿಸಾನ್ ಮೊಬೈಲ್ ಆ್ಯಪ್ ಮೂಲಕ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಹಾಗೂ ಇ-ಕೆವೈಸಿ ಮಾಡದೇ ಇದ್ದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯ ರೈತರ ಖಾತೆಗೆ ಜಮಾ ಆಗುವ ಮುಂದಿನ ಕಂತು ಸ್ಥಗಿತಗೊಳ್ಳಲಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250
ಪ್ರಚಾರ M48
ಜಾಹೀರಾತು ಸ್ಥಳ ಲಭ್ಯವಿದೆ
336x280