ಕಾರವಾರ: ಉದ್ಯೋಗ ಹುಡುಕುತ್ತಿರುವ ಯುವಜನರಿಗೆ ಕಾರವಾರದಲ್ಲಿ ನೇರ ಉದ್ಯೋಗ ಸಂದರ್ಶನದ ಅವಕಾಶ ಕಲ್ಪಿಸಲಾಗಿದೆ. ಯೋಜನಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪನಿಯಾದ ಮೈಟೈಲ್ಸ್ ಪ್ರೈ.ಲಿ.ಯಲ್ಲಿ ಖಾಲಿ ಇರುವ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗಾಗಿ ಸೆ.9ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು ಉದ್ಯೋಗ ಸ್ಥಳವಾಗಿರಲಿದೆ.
ಸೆ.9ರಂದು ಕಾರವಾರದ ಸಿವಿಲ್ ಕೋರ್ಟ್ ರಸ್ತೆಯಲ್ಲಿರುವ ಪಂಜಾಬ್ ನ್ಯಾಶನಲ್ ಬ್ಯಾಂಕ್ ಸಮೀಪದ ಶ್ರೀಮತಿ ಪ್ರೇಮಾಬಾಯಿ ರಾಯ್ಕರ ಬಿಲ್ಡಿಂಗ್‌ನಲ್ಲಿರುವ ಯೋಜನಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಪ್ರತಿಯೊಂದಿಗೆ ನೇರವಾಗಿ ಹಾಜರಾಗುವಂತೆ ಕಚೇರಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ 8310044796 ಮೊಬೈಲ್ ಸಂಖ್ಯೆ ಅಥವಾ 08382-226386 ಕಚೇರಿ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಯೋಜನಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
