ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಬಳ್ಳಾರಿ ಚಲೋ ಪಾದಯಾತ್ರೆಯ 9ನೇ ದಿನ: ಬಿಜೆಪಿ ನಾಯಕರಿಂದ ಭರ್ಜರಿ ಬೆಂಬಲ

Pakka News Web • 9 ಸೆಪ್ಟೆಂ 2026,

ಶಿರಸಿ:ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ 10 ದಿನಗಳ ‘ಬಳ್ಳಾರಿ ಚಲೋ’ ಪಾದಯಾತ್ರೆ 9ನೇ ದಿನಕ್ಕೆ ಕಾಲಿಟ್ಟಿದ್ದು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು.

ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ರಾಜ್ಯ ಬಿಜೆಪಿ ಮಾಧ್ಯಮ ವಕ್ತಾರ ಹರಿಪ್ರಕಾಶ್ ಕೋಣೆಮನೆ, ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗುರುಪ್ರಸಾದ್ ಹೆಗಡೆ ಹರ್ತೆಬೈಲ್ ಹಾಗೂ ಪ್ರಶಾಂತ್ ನಾಯ್ಕ ಸೇರಿದಂತೆ ಹಲವು ಪ್ರಮುಖ ಮುಖಂಡರು ಭಾಗವಹಿಸಿದರು.

ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಪ್ರೇಮಕುಮಾರ್ ಕೆ. ನಾಯ್ಕ, ಯಲ್ಲಾಪುರ ಕ್ಷೇತ್ರದ ಬಿಎಲ್‌ಎ-1 ರಾಘು ಭಟ್ ಹಾಸಣಗಿ, ಬನವಾಸಿ ಮಂಡಲ ರೈತ ಮೋರ್ಚಾ ಅಧ್ಯಕ್ಷ ಮಣಿಕಂಠ ಎಂ. ಪಾಟೀಲ್ ಅವರೊಂದಿಗೆ ಬನವಾಸಿ ಮಂಡಲದ ಯುವ ಮೋರ್ಚಾ ಪದಾಧಿಕಾರಿಗಳು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.

ಬನವಾಸಿ ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ಕೃಷ್ಣಮೂರ್ತಿ ನಾಯ್ಕ ಬೆಂಗಳೆ, ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ ನಾಯ್ಕ ಉಪ್ಪಳೆಕೊಪ್ಪ, ಪವನಕುಮಾರ್ ಕೇಸರಕರ್, ನಾಗರಾಜ್ ಹೆಗಡೆ, ರಾಜೇಂದ್ರ ಶಿವಾಜಿ ಗೌಡರ್ ಸೇರಿದಂತೆ 50ಕ್ಕೂ ಹೆಚ್ಚು ಯುವ ಮೋರ್ಚಾ ಪದಾಧಿಕಾರಿಗಳು ಭಾಗವಹಿಸಿ ಪಾದಯಾತ್ರೆಗೆ ಬೆಂಬಲ ನೀಡಿದರು.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250