ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜಿ. ಟಿ. ನಾಯ್ಕ ನೇಮಕ

Pakka News Web • 9 ಸೆಪ್ಟೆಂ 2026,

ಕಾರವಾರ: ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಹಾಗೂ ಕಾಂಗ್ರೆಸ್ ಮುಖಂಡ ಜಿ.ಟಿ. ನಾಯ್ಕ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನೇಮಕ ಮಾಡಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸೆಪ್ಟೆಂಬರ್ 9ರಂದು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಕಾಂಗ್ರೆಸ್ ಅಧ್ಯಕ್ಷರು ಕರ್ನಾಟಕದ ವಿವಿಧ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ನೇಮಕಾತಿ ಪ್ರಸ್ತಾವನೆಗೆ ಅನುಮೋದನೆ ನೀಡಿರುವುದಾಗಿ ತಿಳಿಸಿದ್ದಾರೆ. ಈ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ.

ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಕೈಗೊಳ್ಳಲಾಗಿರುವ ‘ಸಂಘಟನ್ ಸೃಜನ್ ಅಭಿಯಾನ’ದ ಭಾಗವಾಗಿ ಈ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಪ್ರತಿ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಸ್ಥಳೀಯ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ವಿವಿಧ ಹಿತಾಸಕ್ತಿಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿ ಸಂಘಟನೆಯ ಸ್ಥಿತಿಗತಿ ಕುರಿತು ಸಮಗ್ರ ಪರಿಶೀಲನೆ ನಡೆಸಿದ್ದರು.

ವೀಕ್ಷಕರು ಸಲ್ಲಿಸಿದ ವರದಿಗಳ ಆಧಾರದ ಮೇಲೆ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ವೈಯಕ್ತಿಕ ಮಟ್ಟದಲ್ಲಿ ಚರ್ಚೆ ನಡೆಸಿದ ಬಳಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜಿ.ಟಿ. ನಾಯ್ಕ ಅವರ ನೇಮಕ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದ್ದು, ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ಮುಖಂಡರು ವ್ಯಕ್ತಪಡಿಸಿದ್ದಾರೆ.  ಜಿ. ಟಿ. ನಾಯ್ಕರ ನೇಮಕದಿಂದ, ಅವರ ಅಭಿಮಾನಿಗಳಲ್ಲಿ ಹರ್ಷ ತಂದಿದೆ.

.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250