ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಜಿ.ಟಿ. ನಾಯ್ಕ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ: ಶ್ರೀ ರಾಘವೇಂದ್ರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪವನ್ ನಾಯ್ಕ್

Pakka News Web • 10 ಸೆಪ್ಟೆಂ 2026,

ಶಿರಸಿ: ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಜನನಾಯಕರೆಂದು ಗುರುತಿಸಿಕೊಂಡಿರುವ ಶ್ರೀ ಜಿ.ಟಿ. ನಾಯ್ಕ್ ಅವರು ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಶಿರಸಿಯ ಶ್ರೀ ರಾಘವೇಂದ್ರ ಮಠದಲ್ಲಿ ಯುವ ಮುಖಂಡ ಪವನ್ ನಾಯ್ಕ್ ಅವರು ವಿಶೇಷ ಪೂಜೆ ಸಲ್ಲಿಸಿದರು.

ಅವರ ಯಶಸ್ವಿ ನಾಯಕತ್ವ, ಉತ್ತಮ ಆರೋಗ್ಯ ಹಾಗೂ ಜನಸೇವೆಯ ಪಯಣಕ್ಕೆ ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದ ಸದಾ ಇರಲಿ ಎಂದು ಪ್ರಾರ್ಥಿಸಲಾಯಿತು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿಯಾಗಿರುವ ಯುವ ಮುಖಂಡ ಪವನ್ ನಾಯ್ಕ ಅವರು ವಿಶೇಷ ಪೂಜೆಯಲ್ಲಿ ಭಾಗವಹಿಸಿ, ಜಿ.ಟಿ. ನಾಯ್ಕ್ ಅವರ ನೇಮಕವು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್‌ಗೆ ಹೊಸ ಚೈತನ್ಯ ತುಂಬಲಿದೆ.

ಜಿಲ್ಲೆಯಾದ್ಯಂತ ಪಕ್ಷದ ಸಂಘಟನೆಗೆ ಹೊಸ ಬಲ ನೀಡುವ ಸಾಮರ್ಥ್ಯ, ಕಾರ್ಯಕರ್ತರನ್ನು ಒಗ್ಗೂಡಿಸುವ ನಾಯಕತ್ವ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ಆತ್ಮೀಯ ಬಾಂಧವ್ಯ ಜಿ.ಟಿ. ನಾಯ್ಕ್ ಅವರ ಪ್ರಮುಖ ಶಕ್ತಿಗಳಾಗಿವೆ. ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಮತ್ತಷ್ಟು ಸಂಘಟಿತವಾಗಿ ಬೆಳೆಯಲಿದ್ದು, ಯುವಕರು, ಮಹಿಳೆಯರು ಹಾಗೂ ವಿವಿಧ ಸಮಾಜದ ವರ್ಗಗಳ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ಕೆಲಸಗಳು ಪರಿಣಾಮಕಾರಿಯಾಗಿ ನಡೆಯಲಿವೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

ಮುಂಬರುವ ದಿನಗಳಲ್ಲಿ ಪಕ್ಷದ ತಳಮಟ್ಟದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಿ, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬುವ ಜೊತೆಗೆ ಜನಪರ ಹೋರಾಟಗಳು, ಸಾಮಾಜಿಕ ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿ ವಿಚಾರಗಳಲ್ಲಿ ಪಕ್ಷವನ್ನು ಇನ್ನಷ್ಟು ಸಕ್ರಿಯಗೊಳಿಸುವ ಕೆಲಸಗಳು ನಡೆಯಲಿವೆ ಎಂದು ಪವನ್ ನಾಯ್ಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ರಾಜಕೀಯ ಧೋರಣೆ ಹಾಗೂ ಪಕ್ಷದ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಜಿ.ಟಿ. ನಾಯ್ಕ್ ಅವರ ನಾಯಕತ್ವ ಮಹತ್ವದ ಪಾತ್ರ ವಹಿಸಲಿದೆ. ಅವರ ಅನುಭವ, ಸಂಘಟನಾ ಕೌಶಲ್ಯ ಮತ್ತು ಜನಪರ ಚಿಂತನೆ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವಲ್ಲಿ ಸಹಕಾರಿಯಾಗಲಿದ್ದು, ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ನಿರೀಕ್ಷೆ ಮತ್ತು ಆತ್ಮವಿಶ್ವಾಸ ಮೂಡಿಸಿದೆ.

ಈ ಸಂದರ್ಭದಲ್ಲಿ ಜಿ.ಟಿ. ನಾಯ್ಕ್ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಯಶಸ್ವಿ ಅವಧಿ ಪೂರ್ಣಗೊಳಿಸಿ, ಪಕ್ಷವನ್ನು ಇನ್ನಷ್ಟು ಸದೃಢಗೊಳಿಸುವುದರ ಜೊತೆಗೆ ಜನಸೇವೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ನಿರ್ಮಿಸಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250